ad

ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ-temporary stops continue

SUDDILIVE || SHIVAMOGGA

ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ-temporary stops continue

Temporary, stops

ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ.

ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತದೆ.

ಈ ನಿಲುಗಡೆಗಳು 24 ಆಗಸ್ಟ್ 2025ರಿಂದ 23 ಫೆಬ್ರವರಿ 2026ರವರೆಗೆ ಆರು ತಿಂಗಳ ಕಾಲ, ಈಗಿರುವ ಸಮಯಗಳಲ್ಲೇ ಜಾರಿಯಲ್ಲಿ ಇರುತ್ತವೆ

ಈ ನಿಲುಗಡೆಯ ಮುಂದುವರಿಕೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಉತ್ತಮ ಸಂಪರ್ಕ ಹಾಗೂ ಅನುಕೂಲ ಕಲ್ಪಿಸುತ್ತದೆ.

temporary stops continue

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close