SUDDILIVE || SHIVAMOGGA
ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನ-World Breastfeeding Week at Sarji Hospital
ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶಿವಮೊಗ್ಗ, ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ, ಮೈತ್ರಿ ಕಾಲೇಜ್ ಆಫ್ ನರ್ಸಿಂಗ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನದ ಅಂಗವಾಗಿ ಬುಧವಾರ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನವನ್ನು ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಮಾತನಾಡಿ ತಾಯಿಯ ಎದೆ ಹಾಲು ಮಗುವಿಗೆ ಅಮೃತಕ್ಕೆ ಸಮಾನ, ಅಮೃತ ನೀಡುವ ತಾಯಿ ದೇವರಿಗೆ ಸಮಾನ ಶಿಶುವಿನ ಬೆಳವಣಿಗೆ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗ, ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ. ತಾಯಿಯ ಎದೆ ಹಾಲು ಮಗುವಿಗೆ ಅತ್ಯುತ್ತಮವಾದ ಪೋಷಣೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎದೆಹಾಲು ಮಗುವಿನ ಅರೋಗ್ಯಕರ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಹೊಂದಿದ್ದು, ಇದು ಮಗುವಿನ ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಹಾಲುಣಿಸುವುದರಿಂದ ತಾಯಿ ಮತ್ತು ಮಗುವಿನ ನಡುವಿನ ವಾತ್ಸಲ್ಯ, ಬಾಂಧವ್ಯ ಮತ್ತು ಪ್ರೀತಿ ಸಹ ಹೆಚ್ಚಾಗುತ್ತದೆ . ಒಂದು ಕಟ್ಟಡ ಕಟ್ಟ ಬೇಕು ಎಂದರೆ ಅದರ ಫೌಂಡೇಶನ್ ಗಟ್ಟಿ ಇರಬೇಕು ಹಾಗೆಯೇ ಮಗು ಅರೋಗ್ಯವಾಗಿರಬೇಕು ಎಂದರೆ ಹುಟ್ಟಿದ ಮಗುವಿಗೆ ತಾಯಿ ಎದೆ ಹಾಲನ್ನು ಸಮರ್ಪಕವಾಗಿ ನೀಡಬೇಕು ಎಂದು ಹೇಳಿದರು. ತಾಯಿಯ ಎದೆ ಹಾಲು ಶಿಶುಗಳಿಗೆ ಪೋಷಣೆ ನೀಡುತ್ತದೆ, ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ, ಅತಿಸಾರ ಮತ್ತು ನ್ಯುಮೋನಿಯಾದಂತಹ ರೋಗಗಳನ್ನು ತಡೆಯುತ್ತದೆ. ಅಲ್ಲದೆ, ಇದು ತಾಯಂದಿರಲ್ಲಿ ಸ್ತನ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ ಮತ್ತು ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆಯಾಗಿ ಸ್ತನ್ಯಪಾನ ತಾಯಿ ಮತ್ತು ಮಗು ಇಬ್ಬರ ಆರೋಗ್ಯಕ್ಕೂ ತುಂಬಾ ಸಹಕಾರಿ ಎಂದು ಹೇಳಿದರು.
ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷರಾದ ಅನ್ನಪೂರ್ಣ ರಂಗರಾಜನ್ ಮಾತನಾಡಿ ಈಗೀನ ತಾಯಿಂದರು ಹಾಲುಣಿಸುವುದರಿಂದ ತಮ್ಮ ಸೌಂದರ್ಯ ಹಾಳಾಗುತ್ತದೆ ಎನ್ನುವ ತಪ್ಪು ಕಲ್ಪನೆಯನ್ನು ಮಾಡಿಕೊಳ್ಳುತ್ತಾರೆ. ಆದರೆ ತಾಯಿ ಮಗುವಿಗೆ ಎದೆ ಹಾಲು ಕೊಡುವುದರಿಂದ ಸೌಂದರ್ಯ ದುಪ್ಪಟ್ಟಾಗುತ್ತದೆ. ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಅತ್ಯಗತ್ಯ. ಹೀಗಾಗಿ ಈ ಸ್ತನ್ಯಪಾನಕ್ಕೆ ಸಂಬಂಧಿಸಿದ್ದಂತೆ ಜಾಗೃತಿ ಮೂಡಿಸಲು ಹಾಗೂ ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸಲು ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಪ್ರತಿ ವರ್ಷ ಆಗಸ್ಟ್ 1 ರಿಂದ ಆಗಸ್ಟ್ 7ರ ವರೆಗೆ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯ ಕುಮಾರ ಮಾಯೆರ , ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳಿಧರ್ ರಾವ್ ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷರಾದ ಅನ್ನಪೂರ್ಣ ರಂಗರಾಜನ್, ಮಕ್ಕಳ ತಜ್ಞವೈದ್ಯರಾದ ಡಾ. ಶಮಿತಾ ಆರ್, ಡಾ.ವಿನಯ್ ಪಾಟೀಲ್, ಡಾ.ರಜತ್, ಡಾ ವಿಕ್ರಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
World Breastfeeding Week at Surji Hospital
