SUDDILIVE || SHIVAMOGGA
ಸಿದ್ದಹಳ್ಳಿಯಲ್ಲಿ ಯುವಕ ಆತ್ಮಹತ್ಯೆ-Youth commits suicide in Siddahalli
ಶಿವಮೊಗ್ಗ ತಾಲೂಕು ಸಿದ್ದರಹಳ್ಳಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದರಹಳ್ಳಿಯಲ್ಲಿ ಮನೆಯೊಂದರಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನ ನವೀನ (26) ಎಂದು ಗುರುತಿಸಲಾಗಿದೆ. ಆತನ ಆತ್ಮಹತ್ಯೆಗೆ ಪ್ರೀತಿಯ ಹಿನ್ನಲೆಯಿದೆ ಎಂದು ಹೇಳಲಾದರೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ನವೀನ ಪ್ಲಂಬಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ.
ಇಂದು ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತುಂಗ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದೆ.
Youth commits suicide in Siddahalli
