SUDDILIVE || SHIVAMOGGA
ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾದ 19 ವರ್ಷದ ಯುವಕನಿಗೆ 20 ವರ್ಷ ಸಜೆ-19-year-old man sentenced to 20 years for marrying off a minor girl
ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತ ಬಾಲಕಿಯನ್ನ ಮದುವೆಯಾಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಶಿಕ್ಷೆಯನ್ನ ನ್ಯಾಯಾಲಯ ವಿಧಿಸಿ ತೀರ್ಪು ನೀಡಿದೆ.
2022 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವಾಸಿ 19 ವರ್ಷ ವಯಸ್ಸಿನ ಯುವಕ ನೊಬ್ಬನು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಬಾಲಕಿಯನ್ನು ಮದುವೆಯಾಗಿರುತ್ತಾನೆ. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಪಿಸಿಎಂ ಕಾಯ್ದೆ ರಿತ್ಯಾ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಅಭಯ್ ಪ್ರಕಾಶ್ ಸೋಮನಾಳ್ ಪಿಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಹೆಚ್.ಆರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು ಘನ FTSC-1 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ದಿನಾಂಕ: 23-09-2025 ರಂದು ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ನಿಂಗನಗೌಡಾ ಭ. ಪಾಟೀಲ್ ರವರು ಆರೋಪಿತನಿಗೆ ಕಲಂ 6 ಪೋಕ್ಸೋ ಕಾಯಿದೆಗೆ 20 ವರ್ಷ ಕಾರಾವಾಸ ಶಿಕ್ಷೆ ಮತ್ತು 50,000/- ರೂ ದಂಡ ವಿಧಿಸಿದ್ದು, ಆರೋಪಿಯಿಂದ 80,000/- ರೂ ದಂಡದ ಮೊತ್ತವನ್ನು ನೊಂದ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗದಿಂದ ಸಂತ್ರಸ್ತ ಬಾಲಕಿಗೆ 4,00,000/- ರೂ ಪರಿಹಾರವನ್ನು ನೀಡುವಂತೆ ಆದೇಶಿಸಿರುತ್ತಾರೆ.
19-year-old man sentenced to 20 years for marrying off a minor girl
