SUDDILIVE || SHIVAMOGGA
ಡಿಜೆ ವಿರುದ್ಧ 55 ಪ್ರಕರಣ ದಾಖಲು-55 cases registered against DJ
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಬಳಸಿರುವ ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನು ಉಂಟು ಮಾಡಿರುವ ಸೌಂಡ್ ಬಾಕ್ಸ್ ಗಳನ್ನು(ಡಿಜೆ) ಬಳಕೆ ಮಾಡಿರುವವರ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಜಿಲ್ಲಾಧ್ಯಂತ ಒಟ್ಟು 55 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಇಲಾಖೆ ಕುಮಾರ್ ಇವುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಮುಂದಿನ ದಿನಗಳಲ್ಲಿ ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡುವವರ ವಿರುದ್ಧ ಇನ್ನೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ ಮುಂದುವರಿಕೆ
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .
55 cases registered against DJ