SUDDILIVE || SHIVAMOGGA
ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಮನವಿ-Appeal to withdraw case against pro-Kannada activists
ಕನ್ನಡ ಪರ ಹೋರಾಟಗಾರರ ವಿರುದ್ಧ ಹಾಕಿರುವ ಸುಳ್ಳು ಮೊಕದ್ದಮೆಯನ್ನ ಹಿಂಪಡೆಯಬೇಕು ಎಂದು ಆಗ್ರಹಿಸಿ ಇಂದು ಕನ್ನಡಿಗರ ಕಾರ್ಮಿಕರಕ್ಷಣ ವೇದಿಕೆಯ ವಾಟಾಳ್ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಪ್ರತಿಭಟಿಸಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ನಡೆದಂತಹ ತಾಜ್ ವೆಸ್ಟ್ ಎಂಡ್ ಪಂಚತಾರಾ ಹೋಟೆಲ್ ನಲ್ಲಿ ಸಂಸದೀಯ ರಾಜಭಾಷಾ ಸಮಿತಿ ನಡೆಸುತ್ತಿದ್ದ ಹಿಂದಿ ಹೇರಿಕೆ ಕುತಂತ್ರಗಳ ಸಮಲೋಚನಾ ಕಾರ್ಯಗಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಕಾರ್ಯಕರ್ತರು ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಇದು ಹಿಂದಿ ಸಾಮ್ರಾಜ್ಯ ಶಾಹಿಗಳಿಗೆ ನಾವು ಕೊಟ್ಟ ಬಹುದೊಡ್ಡ ಎಚ್ಚರಿಕೆ.
ಸ್ವಾತಂತ್ರ್ಯ ನಂತರ ಇದೇ ರಾಜಾ ಭಾಷಾ ಆಯೋಗ/ ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ಮೊಟ್ಟಮೊದಲ ಬಾರಿ ಈ ರಾಜಭಾಷಾ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದೆ.
ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಹಿಂದಿ ಪ್ರಚಾರಕ್ಕೆ ಯಾವುದೇ ಸಂಸ್ಥೆ ಕಾರ್ಯಕ್ರಮ ಮಾಡಲು ಮುಂದಾದರೆ ಅದರ ಪರಿಣಾಮವನ್ನು ಅವರೇ ಎದುರಿಸಬೇಕಾಗುತ್ತದೆ. ನಮ್ಮ ಸಹನೆ ಮಿತಿ ಮೀರಿದೆ. ಇನ್ನು ನಾವು ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಸುಳ್ಳು ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು.
