SUDDILIVE || HOLEHONNURU
ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವು-Boy dies after drowning while celebrating Ganpati festival
ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ.
ಇಟ್ಟಿಗೆಹಳ್ಳಿಯ ಕುಶಾಲ್ (೧೦) ಮೃತ ಬಾಲಕನಾಗಿದ್ದಾನೆ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿಯನ್ನು ತಯಾರುಮಾಡಿ ಪೂಜೆ ಸಲ್ಲಿಸಿದ್ದಾರೆ. ಸೋಮವಾರ ಸಂಜೇ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ.
ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು.ನಾಲೆಯಲ್ಲಿ ಗಣಪತಿ ಬಿಡುವಾಗ ಆಯಾತಪ್ಪಿದ ಬಾಲಕ ಕುಶಾಲ್ ನಾಲೆಗೆ ಬಿದ್ದಿದ್ದಾನೆ ಎನ್ನಲಾಗುತ್ತಿದೆ. ಸ್ಥಳೀಯರು ನಾಲೆಯಲ್ಲಿ ಹುಡುಕಾಡಿ ಶವ ಹೋರ ತೆಗೆದಿದ್ದಾರೆ. ಇಟ್ಟಿಗೆಹಳ್ಳಿಯಲ್ಲಿ ಬಾಲಕ ಕುಶಾಲ್ ನ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.