SUDDILIVE || SHIVAMOGGA
ಅತ್ಯಾಚಾರಿಗಳಿಗೆ ಬಿಗಿ ಕಾನೂನು ಜಾರಿಗೊಳಿಸುವಂತೆ ಆಗ್ರಹ-Demand for strict enforcement of laws against rapists
ಅತ್ಯಾಚಾರಿಗಳಿಗೆ ಬಿಗಿ ಕಾನೂನು ತರುವಂತೆ ಅರುಣೋದಯ ಜಿಲ್ಲಾ ಮಹಿಳಾ ಒಕ್ಕೂಟವು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ.
ದೇಶದಲ್ಲಿ ವಿವಿಧೆಡೆ ಮಹಿಳೆ ಮತ್ತು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕಿರುಕುಳ, ದೈಹಿಕ ಮತ್ತು ಮಾನಸಿಕ ಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕೂಡ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದೆ.
ಮಹಿಳೆಯರ ಮತ್ತು ಮಕ್ಕಳ ಮೇಲೆ ಬೇರೆ ಬೇರೆ ಸ್ವರೂಪದಲ್ಲಿ ವರ್ಷದಿಂದ ವರ್ಷಕ್ಕೆ ದೌರ್ಜನ್ಯ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಭಾರತವು ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲದ ದೇಶವಾಗುವ ನಿಟ್ಟಿನಲ್ಲಿ ಸಾಗುತ್ತಿದೆ. ಮಹಿಳೆಯರು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದೆ.
ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ನಿಲ್ಲಬೇಕಾದರೆ ಕಠಿಣ ಕಾನೂನು ಜಾರಿಗೆ ತರಬೇಕು. ಅಪರಾಧಿಗಳಿಗೆ ಜಾಮೀನು ರಹಿತ ಶಿಕ್ಷೆ ಜಾರಿಗೆ ತರಬೇಕು ಎಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.
Demand for strict enforcement of laws against rapists
