SUDDILIVE || SHIVAMOGGA
ಭಾನುಮುಷ್ತಾಕ್ ಬದಲು ಎಸ್ ಎಲ್ ಭೈರಪ್ಪರನ್ನ ದಸರಾ ಉದ್ಘಾಟಕರನ್ನಾಗಿ ಆಹ್ವಾನಿಸುವಂತೆ ಆಗ್ರಹ-Demand to invite SL Bhyrappa as the Dasara inaugurator instead of Bhanumushtak
ಮೈಸೂರು ದಸರಾ ಉದ್ಘಾಟನೆಗೆ ಭಾನುಮುಷ್ತಾಕ್ ಅವರನ್ನು ಆಹ್ವಾನಿಸಿರುವ ನಿರ್ಧಾರದಿಂದ ಹಿಂದೆ ಸರಿದು ಸರ್ಕಾರ ಎಸ್ ಎಲ್ ಭೈರಪ್ಪನವರನ್ನ ಉದ್ಘಾಟಕರನ್ನಾಗಿ ಆಹ್ವಾನಿಸುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಲಾಯಿತು.
ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿತ ಮುಖ್ಯ ಅತಿಥಿಗಳಿಗೆ ದೇವಿಯ ಮೇಲೆ ಶ್ರದ್ಧೆ ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ ಭಾನುಮುಷ್ತಾಕ್ ಅವರ ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲ ವೆಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ ದತ್ತಪೀಠ ಹೋರಾಟದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಅನುಚಿತವಾಗಿದ್ದು ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟಾಗಿದೆ.
ಕರ್ನಾಟಕವು ಸಂಸ್ಕೃತಿ ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಅಸಂಖ್ಯಾತ ಗಣ್ಯರನ್ನು ಹೊಂದಿದೆ. ಪ್ರಸಿದ್ಧ ಸಾಹಿತಿ ಎಸ್ಎಲ್ ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಮಾನಗಳ ಜೊತೆಗೆ ಪದ್ಮಭೂಷಣ ಪ್ರಶಸ್ತಿಯನ್ನು ಹೊಂದಿದ್ದಾರೆ. ಅವರ ಸಾಹಿತ್ಯ ಮತ್ತು ದಾರ್ಶನಿಕ ಕೃತಿಗಳು ರಾಷ್ಟ್ರಮಟ್ಟದಲ್ಲಿ ಕೀರ್ತಿ ತಂದು ಕೊಡುತ್ತದೆ ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಪರಿಗಣಿಸಿ ವಿದೇಶಿ ಬೂಕರ್ ಪ್ರಶಸ್ತಿ ಪಡೆದವರನ್ನು ಆಹ್ವಾನಿಸುವುದು ಎಷ್ಟು ಸರಿ ಎಂದು ಸಂಘಟನೆ ಮನವಿಯಲ್ಲಿ ಪ್ರಶ್ನಿಸಿದೆ
ಕರ್ನಾಟಕದ ಕೋಟ್ಯಾಂತರ ಭಕ್ತರ ಪರವಾಗಿ ಸರ್ಕಾರವು ಬಾನು ಮುಷ್ತಾಕರನ್ನ ಆಹ್ವಾನಿಸುವ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿದು ಪವಿತ್ರ ಹಬ್ಬದ ಉದ್ಘಾಟನೆಗೆ ಡಾ. ಎಸ್ ಎಲ್ ಭೈರಪ್ಪ ಅವರನ್ನು ಗಣ್ಯರನ್ನಾಗಿ ಆಹ್ವಾನಿಸುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.
Demand to invite SL Bhyrappa