SUDDILIVE || SHIVAMOGGA
ಶಿವಪ್ಪ ನಾಯಕ ಅರಮನೆಯಲ್ಲಿ ಕಲಾದಸರಾ-Kala Dasara at Shivappa Nayaka Palace
ಶಿವಪ್ಪನಾಯಕ ಅರಮನೆಯಲ್ಲಿ ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್, ಬೊಂಬೆ ಪ್ರದರ್ಶನ ಮಾಡಲಾಗಿದೆ.
ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಇನ್ನು, ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ಜಗದೀಶ್ ಅವರು ದಸರಾ ಬೊಂಬೆಗಳ ಪ್ರದರ್ಶಿಸಿದ್ದಾರೆ. ಇದೇ ಮೊದಲ ಬಾರಿ ಗೊಂಬೆ ಪ್ರದರ್ಶನ ಮಾಡಲಾಗಿದೆ. ಪಟ್ಟದ ಗೊಂಬೆ, ಅರಿಷಿಣ ಕುಟ್ಟಿವ ಗೊಂಬೆ, ಅರಮನೆ, ಅಂಬಾರಿ, ಚನ್ನಪಟ್ಟಣ ಗೊಂಬೆಗಳು, ದಶಾವತಾರ, ಅಷ್ಟಲಕ್ಷ್ಮಿ , ನವದುರ್ಗೆ, ರಾಮಮಂದಿರ, ಕಾಡು, ವನ್ಯಜೀವಿಗಳು, ಪ್ರಾಣಿಗಳ ರಕ್ಷಣೆ, ಫೈಬರ್ ಸರ್ಪವನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ.
ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ ಹೇಳಿಕೆ
ದಸರಾ ಅಂದರೆ ಮೈಸೂರಿನ ಬಗ್ಗೆ ಮಾತ್ರ ಚರ್ಚೆಯಾಗುತ್ತದೆ. ಶಿವಮೊಗ್ಗ ದಸರಾ ಸಹ ಅತ್ಯಂತ ವಿಭಿನ್ನವಾಗಿ, ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಪ್ರವಾಸೋದ್ಯಮ ದಿನದ ಹಿನ್ನೆಲೆ ಛಾಯಾಚಿತ್ರ ಪ್ರದರ್ಶಿಸಲಾಗುತ್ತಿದೆ. ಮಕ್ಕಳು ಹೆಚ್ಚಾಗಿ ಉತ್ಸವದಲ್ಲಿ ಭಾಗವಹಿಸಬೇಕು.
ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
ಮೈಸೂರು ದಸರಾ ಬಳಿಕ ಶಿವಮೊಗ್ಗ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಮುಂದೆ ಮತ್ತಷ್ಟು ಯಶಸ್ವಿಯಾಗಿ ನಡೆಯಲಿದೆ. ದೈವ ಇಚ್ಛೆಯಿಂದ ನಾನು ನಾಲ್ಕನೇ ದಸರಾದಲ್ಲಿ ಭಾಗಿಯಾಗಿದ್ದೇನೆ.
ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುಜೀಬ್ ಸೇರಿದಂತೆ ಹಲವರು ಇದ್ದರು.
Kala Dasara at Shivappa Nayaka Palace