SUDDILIVE || SHIVAMOGGA
ಪ್ರಧಾನಿ ಹುಟ್ಟುಹಬ್ಬದ ಅಂಗವಾಗಿ ಎಂಎಲ್ ಸಿ ಡಾ. ಸರ್ಜಿಯವರಿಂದ 68ನೇ ಬಾರಿ ರಕ್ತದಾನ-MLC Dr. Sarji donates blood for the 68th time on the occasion of the Prime Minister's birthday
ದೇಶದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ನೇ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇಂದು ಭದ್ರಾವತಿಯ ಬಿಜೆಪಿ ಕಾರ್ಯಾಲಯದಲ್ಲಿ ಭದ್ರಾವತಿ ನಗರ ಮಂಡಲ ಯುವಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಸತತ 68 ನೇ ಯ ಬಾರಿ ರಕ್ತದಾನವನ್ನು ಮಾಡಿ ಮಾದರಿಯಾಗಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಕೂಡ ರಕ್ತದಾನ ಮಾಡಿದರು.
ಶಿಬಿರದಲ್ಲಿ ಭದ್ರಾವತಿ ನಗರ ಮಂಡಲ ಅಧ್ಯಕ್ಷರಾದ ಧರ್ಮಪ್ರಸಾದ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಆನಂದ್ , ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ರಕ್ತದಾನ ಶಿಬಿರ ಸಂಚಾಲಕ ಧನುಷ್, ನರಸಭಾ ಸದಸ್ಯರಾದ ಅನುಪಮಾ ಚನ್ನೇಶ್, ಪ್ರಮುಖರಾದ ಶಿವಕುಮಾರ್, ಚನ್ನೇಶ್, ರಘುರಾಮ್, ಮಂಜಣ್ಣ ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.
MLC Dr. Sarji donates blood for the 68th time