SUDDILIVE || SHIVAMOGGA
ಅವೈಜ್ಞಾನಿಕ ಒಳ ಮೀಸಲಾತಿಗೆ ಬೃಹತ್ ಪ್ರತಿಭಟನೆ-Massive protest against unscientific internal reservation
ಶಿವಮೊಗ್ಗ ನಗರದಲ್ಲಿ ಜಿಲ್ಲಾ ಬಂಜಾರ ಸಂಘಟನೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಅವೈಜ್ಞಾನಿಕ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಯಾವುದೇ ಕಾರಣಕ್ಕೂ ಅವೈಜ್ಞಾನಿಕ ಒಳಮಿಸಲಾತಿ ವರ್ಗೀಕರಣವನ್ನು ಜಾರಿಗೆ ತರದಂತೆ ಒತ್ತಾಯಿಸಲಾಗಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಗೋಪಿ ವೃತ್ತದಲ್ಲಿ ಮತ್ತು ಮಹಾವೀರ ವೃತ್ತದಲ್ಲಿ ಟಯರ್ ಗಳನ್ನ ಸುಡಲಾಯಿತು. ಅವೈಜ್ಞಾನಿಕ ಒಳಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇಂದು ಮುಕ್ತಾಯಗೊಂಡಿದೆ.
Massive protest against unscientific internal reservation

