SUDDILIVE || SHIVAMOGGA
ಸಂಸದರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು-Minister Madhu Bangarappa hits back at MP's statement
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರಕ್ಕೆ ನಿರ್ವಹಣೆಗೆ ನೀಡಬಾರದಾಗಿತ್ತು ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಬೆವರು ಸುರಿಸಿ ಸಂಗ್ರಹಿಸಿದ ತೆರಿಗೆ ಹಣದಿಂದ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗಿದ್ದ ಮೇಲೆ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಯಾಕೆ ನೀಡಬೇಕು? ಇದನ್ನು ಅದಾನಿಯಂತಹ ಖಾಸಗಿ ಸಂಸ್ಥೆಗೆ ನೀಡಬೇಕಿತ್ತೇ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ವಿಮಾನ ನಿಲ್ದಾಣ ಉದ್ಘಾಟನೆಯಾದಾಗ ನೈಟ್ ಲ್ಯಾಂಡಿಂಗ್ ಯಾಕೆ ಇರಲಿಲ್ಲ? ಆಗ ಈ ವ್ಯವಸ್ಥೆ ಅಗತ್ಯವಿದೆ ಎಂದು ಸಂಸದರಿಗೆ ಗೊತ್ತಿರಲಿಲ್ಲವೇ? ಈಗ ನಮ್ಮ ಸರ್ಕಾರ ಬಂದ ಮೇಲೆ ನೈಟ್ ಲ್ಯಾಂಡಿಂಗ್‌ಗೆ ಅಗತ್ಯವಾದ ಉಪಕರಣಗಳು ಬಂದಿದೆ. ಅವುಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿದಾಗ ಒಂದಾದರೂ ವಾಣಿಜ್ಯ ವಿಮಾನ ಬಂದಿತ್ತೇ? ನಮ್ಮ ಸರ್ಕಾರ ಬಂದ ನಂತರವೇ ಶಿವಮೊಗ್ಗದಲ್ಲಿ ವಾಣಿಜ್ಯ ವಿಮಾನಗಳು ಸಂಚರಿಸುತ್ತಿವೆ ಎಂದು ಸಚಿವರು ಹೇಳಿದರು.
Minister Madhu Bangarappa hits back at MP's statement