SUDDILIVE || SHIVAMOGGA
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ-Ravikumar resign for Bhovi development Board president post
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ನ ಕಾರ್ಯಕರ್ತನ ವಿಕೆಟ್ ವೊಂದು ಉರುಳಿದೆ.
ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿ ಕುಮಾರ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಮೂರು ದಿನಗಳ ಹಿಂದೆ ಸಿಎಂ ಡಿಸಿಎಂ ರಾಜೀನಾಮೆ ನೀಡಲು ಸೂಚಿಸಿದರೆ ರಾಜೀನಾಮೆ ಎಂದು ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರವಿಕುಮಾರ್ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮವೊಂದು ಸುದ್ದಿ ಮಾಡಿದೆ.
Ravikumar resign for Bhovi development Board president post

