SUDDILIVE || BHADRAVATHI
ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ-ಪ್ರಕರಣ -Showing of a deadly weapon in a public place - case registered
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಇಬ್ಬರ ವಿರುದ್ಧ ಸುಮೋಟೊ ಪ್ರಕರಣ ದಾಖಲಾಗಿದೆ.
ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವೈನ್ ಶಾಪ್ ಬಳಿ ಕಾರು ನಿಲ್ಲಿಸಿದ್ದ ಇಬ್ಬರು ಅಪರಿಚಿತರು, ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಈ ಸಂಬಂಧ ಸಾರ್ವಜನಿಕ ಸ್ಥಳದಲ್ಲಿ ಭಯ ಹುಟ್ಟಿಸುವ ಹಾಗೆ ಮಾರಕಾಸ್ತ್ರಗಳನ್ನ ಪ್ರದರ್ಶಿಸುತ್ತಿರುವ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಇಬ್ಬರು ಅಪರಿಚಿತರ ವಿರುದ್ಧ ಭದ್ರಾವತಿ ನ್ಯೂ ಟೌನ್ ಪ್ರಕರಣ ದಾಖಲಾಗಿದೆ.
Showing of a deadly weapon in a public place - case registered
