SUDDILIVE || SHIVAMOGGA
6.50 ಕೋಟಿ ಶಿವಮೊಗ್ಗದ ಏರ್ ಫೊರ್ಟ್ ಗೆ ರಾಜ್ಯ ಸರ್ಕಾರ ಅನುದಾನ-State government grants Rs 6.50 crore for Shivamogga airport
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇವಿಗೇಷನ್ ಉಪಕರಣ ಡಿವಿಓರ್ ಅಳವಡಿಕೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. ₹6.50 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಸಚಿವ ಮಧು ಬಂಗಾರಪ್ಪ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಿದ್ದಾರೆ.
ನೈಟ್ ಲ್ಯಾಂಡಿಂಗ್‌ಗೆ ಅನುಕೂಲವಾಗುವ ನ್ಯಾವಿಗೇಷನ್ ಉಪಕರಣ ತರಿಸಲಾಗಿದೆ. ಆದರು ರಾಜ್ಯ ಸರ್ಕಾರ ಅಳವಡಿಕೆಗೆ ಆಸಕ್ತಿ ತೋರಿಸಿಲ್ಲ ಎಂದು ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದರು. ಇದಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದರು. ಇದರ ಬೆನ್ನಿಗೆ ಸಚಿವ ಮಧು ಬಂಗಾರಪ್ಪ ಕಾಮಗಾರಿಗೆ ಹಣ ಬಿಡುಗಡೆ ಕುರಿತು ಮಾಹಿತಿ ಹಂಚಕೊಂಡಿದ್ದು, ವಿಮಾನ ಪ್ರಯಾಣಿಕರಿಗೆ ತುಸು ನೆಮ್ಮದಿ ನೀಡಿದೆ.
State government grants Rs 6.50 crore for Shivamogga airport