SUDDILIVE || SHIVAMOGGA
ವಾಮಮಾರ್ಗದಿಂದ ತಳವಾರ ಜಾತಿ ಸೇರುತ್ತಿರುವವರನ್ನ ತಡೆಗಟ್ಟಿ-ವಾಲ್ಮೀಖಿ ಸಮುದಾಯ ಮನವಿ-Stop those joining the lower caste from the left-wing - appeal of the Valmiki community
ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಲ್ಲಿ ಕರ್ನಾಟಕ ಉಚ್ಛನ್ಯಾಯಲಯದ ಆದೇಶದಂತೆ ಅಂತಹವರ ಮೇಲೆ ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಆಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದೆ
ಈ ನಕಲಿ ಜಾತಿ ಪ್ರಮಾಣ ಪತ್ರಗಳಿಗೆ ಮೂಲ ಕಾರಣ ವೃತ್ತಿಗಾಗಿ ನಾಯಕ ತಳವಾರ ಜಾತಿಗೆ ಸೇರದೆ ಇತರೆ ಜಾತಿಗೆ ಅಂದರೆ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದವರು ತಳವಾರಿಕೆ ವೃತ್ತಿ ಮಾಡುತ್ತಿದ್ದುದು. ಆದರೆ ನಾಯಕ ತಳವಾರರ ಹೆಸರು ಜಾತಿ ಸೂಚಕ ಪದವಾಗಿರುತ್ತದೆ. ರಾಜ್ಯ ಸರ್ಕಾರ ಕುಲಶಾಸ್ತಿçÃಯ ಅಧ್ಯಯನದೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಾಗ ಅಲ್ಲಿಂದ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ ೩೮ರಲ್ಲಿ ಸೇರಿಸಿರುವುದು ನಾಯಕ ತಳವಾರ ಜಾತಿ ಮಾತ್ರ. ಆದ್ದರಿಂದ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದ ತಳವಾರರನ್ನು ಅವರು ಸೇರಿರುವ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-೧ ರ ಕ್ರಮ ಸಂಖ್ಯೆ ೬ ರಲ್ಲಿ ಬೆಸ್ತ ಮುಂತಾದವುಗಳ ಜೊತೆ ಸೇರಿಸಿ ಉದ್ಭವಿಸಿರುವ ಗೊಂದಲಕ್ಕೆ ತೆರೆ ಎಳೆಯಬೇಕು
ಪರಿಶಿಷ್ಟ ಪಂಗಡದವರ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಕಳೆದ ಒಂದು ವರ್ಷಕ್ಕೂ ಮೇಲ್ಪಟ್ಟು ಸಮಯದಿಂದ ಪರಿಶಿಷ್ಟ ವರ್ಗಗಳ ಇಲಾಖೆಗೆ ಸ್ವತಂತ್ರ ಸಚಿವರಿಲ್ಲದೆ ತೊಂದರೆಯಾಗಿದೆ. ಆದ್ದರಿಂದ ಕೂಡಲೆ ಪರಿಶಿಷ್ಟ ವರ್ಗಗಳ ಇಲಾಖೆಗೆ ಸ್ವತಂತ್ರ ಕ್ಯಾಬಿನೆಟ್ ಸಚಿವರನ್ನ ನೇಮಿಸುವುದು
ತಳವಾರ ಹೆಸರಿನಲ್ಲಿ ಕೋಳಿ,ಕಬ್ಬಲಿಗ,ಬೆಸ್ತಾ, ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲು ಪ್ರಾರಂಭಮಾಡಿದರು. ಈ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದು ಪಡಿಸಲು ಎಸ್.ಟಿ,ಎಸ್.ಸಿ,ಒಬಿಸಿ ಕಾಯಿದೆ ಕಲಂ ೪ ಮತ್ತು ೪ಎ ರಲ್ಲಿ ತಹಶೀಲ್ದಾರ್ ಮತ್ತು ಮೇಲಾಧಿಕಾರಿಗಳಿಗೆ ಅಧಿಕಾರ ಇರುತ್ತದೆ.ಆದುದರಿಂದ ಈ ಸಂಬAಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆದೇಶ ನೀಡಲು ಕೋರಿದೆ.
ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೂಡಲೇ ಸ್ಕಾಲರ್ಷಿಪ್ ಹಣವನ್ನು ಬಿಡುಗಡೆ ಮಾಡುವುದು
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಜನಾಂಗದ ಸಾಂಸ್ಕೃತಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ವಿಷಯಗಳ ಬಗ್ಗೆ ಆಧ್ಯಯನ ಮಾಡಲು ವಿಶೇಷ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿದೆ
ರಾಜ್ಯದ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿರುವ ವಾಲ್ಮೀಕಿ ಭವನಗಳನ್ನು ಪೂರ್ಣಗೊಳಿಸಲು ಪರಿಶಿಷ್ಟ ಪಂಗಡದವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಹಾಯಧನ ವಿದ್ಯಾರ್ಥಿ ವೇತನ ಬಾಕಿ ಬಿಡುಗಡೆಗಾಗಿ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ೫೦೦ ಕೋಟಿ ಅನುದಾನ ಬಿಡುಗಡೆ ಮಾಡುವುದು.
ಈಗಾಗಲೇ ಗುರುತಿಸಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬುವುದು ಹಾಗೂ ಹೊಸದಾಗಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸುವುದು. ಕರ್ನಾಟಕ ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿ ಸಂಶೋಧನ ವಿದ್ಯಾರ್ಥಿಗಳಿಗೆ ಅನುಕೂಲಮಾಡಿಕೊಡಲು ಒತ್ತಾಯಿಸಿದೆ
ರಾಜ್ಯದಲ್ಲಿ ವಾಲ್ಮೀಕಿ ನಾಯಕ ಜನಾಂಗದ ಮೇಲೆ ನಿರಂತರ ದೌರ್ಜನ್ಯ, ಕೊಲೆ, ಅತ್ಯಾಚಾರ ಮುಂತಾದ ಘಟನೆಗಳು ಹೇಚ್ಚಾಗುತ್ತಿದ್ದು ಇಂತಹ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಪರಿಶಿಷ್ಟ ಪಂಗಡದ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ವಿರೋಧಿಸಿ ಹೋರಟ ಮಾಡುತ್ತಿರುವ ಹೋರಾಟಗಾರರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಕೂಡಲೆ ಹಿಂಪಡೆದು ಅವರಿಗೆ ಸೂಕ್ತ ಭದ್ರತೆ ಒದಗಿಸುವುದು
ಗಿರಿಜನ ಉಪಯೋಜನೆಯಡಿ ನಿಗದಿಯಾಗಿರುವ ಅನುದಾನವನ್ನು ಪರಿಶಿಷ್ಟರಲ್ಲದವರ ಉಪಯೋಗಕ್ಕೆ ಬಳಸಬಾರದು. ಆಂತಹ ಪ್ರಕರಣಗಳಲ್ಲಿ ದುರ್ಬಳಕೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ. ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದರು ಇಲಾಖೆಗಳಲ್ಲಿ ಪದೋನ್ನತಿ ನೀಡುವಾಗ ವಿಳಂಬ ಧೋರಣೆ ಅನುಸರಿತ್ತಿರುವುದು ಗಮನಿಸಿದ್ದು ವಿಳಂಬ ಮಾಡದೆ ಪ್ರಮೋಷನ್ ನೀಡುವುದು ಹಾಗೂ ಮೀಸಲಾತಿಯಾನುಸಾರ ಪದೋನ್ನತಿ ನೀಡುವುದು
ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಬೇರೆ ಬೇರೆ ಸಮುದಾಯಗಳಿಂದ ಒತ್ತಡಗಳು ಬರುತ್ತಿರುವುದು, ಆ ಒತ್ತಡಗಳಿಗೆ ಸರ್ಕಾರ ಸ್ಪಂದಿಸುತ್ತಿರುವುದನ್ನು ಪತ್ರಿಕೆಗಳ ಮುಖೇನ ಗಮನಿಸಲಾಗುತ್ತಿದೆ. ಇದು ಸಂವಿಧಾನ ಆಶಯಗಳಿಗೆ ವಿರುದ್ದವಾಗಿರುವುದರಿಂದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರವ ನಾವುಗಳು ಸರ್ಕಾರದ ಕ್ರಮವನ್ನು ವಿರೋಧಿಸುತ್ತೇವೆ.
Stop those joining the lower caste from the left-wing - appeal of the Valmiki community