ad

ಸರ್ಜಿ ಆಸ್ಪತ್ರೆಯಲ್ಲಿ 9 ತಿಂಗಳು ಮಗುವಿನ ಯಶಸ್ವಿ ಶಸ್ತ್ರ್ರ ಚಿಕಿತ್ಸೆ-Successful surgery of a 9-month-old baby at Surji Hospital

SUDDILIVE || SHIVAMOGGA

ಸರ್ಜಿ ಆಸ್ಪತ್ರೆಯಲ್ಲಿ 9 ತಿಂಗಳು ಮಗುವಿನ ಯಶಸ್ವಿ ಶಸ್ತ್ರ್ರ ಚಿಕಿತ್ಸೆ-Successful surgery of a 9-month-old baby at Surji Hospital

Surgery, success

ಕ್ರೇನಿಯೊಸಿನೋಸ್ಟೊಸಿಸ್  ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು  ಶಸ್ತ್ರಚಿಕಿತ್ಸೆಯ ಮುಖಾಂತರ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರಿಪಡಿಸಿದ್ದಾರೆ. ತಲೆಬುರುಡೆಯ  ಮೂಳೆಗಳ ಮಧ್ಯೆ ಸೂಚರ್ಸ್ (ಬಿರುಕುಗಳು) ಇರುತ್ತದೆ, ಈ ಬಿರುಕುಗಳು ಅವಧಿಗಿಂತ ಮುಂಚೆ ಕೂಡಿಕೊಂಡರೆ ಆ ಸಂದರ್ಭದಲ್ಲಿ ಬುರುಡೆಯ ಒಂದು ಭಾಗ ಸರಿಯಾಗಿ ಬೆಳವಣಿಗೆ ಆಗುವುದಿಲ್ಲ ಇದನ್ನೇ ಕ್ರೇನಿಯೊಸಿನೋಸ್ಟೊಸಿಸ್ ಎಂದು ಕರೆಯಲಾಗುತ್ತದೆ. ಕ್ರೇನಿಯೊಸಿನೋಸ್ಟೊಸಿಸ್ ನಿಂದ ಮಗುವಿನ ತಲೆಬುರುಡೆ ವಿರೂಪವಾಗಿರುತ್ತದೆ. ಇದನ್ನು ನಿರ್ಲಕ್ಷ್ಯ  ಮಾಡಿದರೆ  ಕಣ್ಣಿನ  ದೃಷ್ಟಿ ಹೋಗಬಹುದು, ಮೆದುಳಿನ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ ಅಥವಾ ಜೀವಕ್ಕೂ ಅಪಾಯವಾಗಬಹುದು. 


ಶಿವಮೊಗ್ಗದಲ್ಲಿ ಇದೇ  ಮೊದಲ ಕ್ರೇನಿಯೊಸಿನೋಸ್ಟೊಸಿಸ್ ಶಸ್ತ್ರಚಿಕಿತ್ಸೆಯಾಗಿದ್ದು, ಯಶಸ್ವಿಯಾಗಿದೆ. ಇದು ಅತ್ಯಂತ ಕಠಿಣ ಮತ್ತು ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ, ಈ ಸರ್ಜರಿ ಗೆ ನರಶಸ್ತ್ರಚಿಕಿತ್ಸಾ ತಜ್ಞವೈದ್ಯರಿರಬೇಕು, ಪ್ಲಾಸ್ಟಿಕ್  ಶಸ್ತ್ರಚಿಕಿತ್ಸಾ ತಜ್ಞವೈದ್ಯರಿರಬೇಕು, ಮಕ್ಕಳ ಅರವಳಿಕೆ ತಜ್ಞ ವೈದ್ಯರಿರಬೇಕು, ಮಕ್ಕಳ ಐ.ಸಿ.ಯು ವ್ಯವಸ್ಥೆ ಇರಬೇಕು ಹಾಗಾಗಿ ಈ ಶಸ್ತ್ರಚಿಕಿತ್ಸೆಗೆ ಒಂದು ತಜ್ಞ ವೈದ್ಯರ ತಂಡ ಬೇಕಾಗುತ್ತದೆ. ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡುವಂತಹ ಕೇಂದ್ರಗಳು ತುಂಬಾ ಕಡಿಮೆ ಇವೆ.


ಈ ಶಸ್ತ್ರಚಿಕಿತ್ಸೆಯಲ್ಲಿ  ನರಶಸ್ತ್ರಚಿಕಿತ್ಸಾ ತಜ್ಞವೈದ್ಯರಾದ ಡಾ.ಹರೀಶ್ ಮೆದುಳಿಗೆ ಯಾವುದೇ ರೀತಿ ಹಾನಿಯಾಗದಂತೆ ಮೆದುಳಿನ ಚಿಪ್ಪನ್ನು ಬೇರ್ಪಡಿಸಿ ಕೊಟ್ಟಿದ್ದಾರೆ. ನಂತರ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞವೈದ್ಯರಾದ ಡಾ. ಚೇತನ್ ಕುಮಾರ್ ನವಿಲೆಹಾಳ್ ಅವರು ಆ ತಲೆ ಬುರುಡೆಯ  ಚಿಪ್ಪಿನ ಆಕಾರವನ್ನು  ಬದಲಾಯಿಸಿ ಸರಿಯಾದ ಆಕಾರಕ್ಕೆ ಬರುವಂತೆ ಸರಿಪಡಿಸಿ ಅಳವಡಿಸಿದ್ದಾರೆ. ಮಕ್ಕಳ ಅರವಳಿಕೆ ತಜ್ಞ ವೈದ್ಯರಾದ ಡಾ.ಅರ್ಜುನ್ ಭಾಗವತ್ ಮಗುವಿಗೆ ಅನೆಸ್ತೇಶಿಯಾ  ನೀಡಿ ಮಗುವಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲು ಸಹಕರಿಸಿದ್ದಾರೆ. 


 ಮಗುವಿಗೆ 8 ತಿಂಗಳು ಇರಬೇಕಾದರೆ ಪೋಷಕರು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದು ಮಕ್ಕಳ ತಜ್ಞ  ವೈದ್ಯರಾದ ಡಾ.ಕಾವ್ಯ ಅವರ ಬಳಿ ತೋರಿಸಿದ್ದಾರೆ, ಈ  ಸಂದರ್ಭದಲ್ಲಿ ಸಿ.ಟಿ ಸ್ಕ್ಯಾನ್ ಮಾಡಿಸಲಾಗಿರುತ್ತದೆ, ಈ ಸಿ.ಟಿ ಸ್ಕ್ಯಾನ್ ನಲ್ಲಿ ಮಗುವಿಗೆ ಕ್ರೇನಿಯೊಸಿನೋಸ್ಟೊಸಿಸ್ ಇರುವುದು ದೃಢಪಟ್ಟಿರುತ್ತದೆ. ಈ ಶಸ್ತ್ರ ಚಿಕಿತ್ಸೆಯ ಬಗ್ಗೆ ಮಗುವಿನ ಪೋಷಕರಿಗೆ ವಿವರಿಸಿದಾಗ ಅವರು ಕೂಡ ದೃಢ ಮನಸ್ಸಿನಿಂದ  ಈ ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡ ನಂತರ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದೇವೆ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಮಗು ಕೂಡಾ ಆರೋಗ್ಯವಾಗಿದೆ,

ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ತಜ್ಞವೈದ್ಯರಾದ ಡಾ.ಹರೀಶ್ ಅವರು,  ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞವೈದ್ಯರಾದ ಡಾ. ಚೇತನ್ ಕುಮಾರ್ ನವಿಲೆಹಾಳ್ ಅವರು, ಮಕ್ಕಳ ಅರವಳಿಕೆ ತಜ್ಞ ವೈದ್ಯರಾದ ಡಾ.ಅರ್ಜುನ್ ಭಾಗವತ್ ಅವರು, ಸರ್ಜಿ ಸೂಪರ್  ಸ್ಪೆಷಾಲಿಟಿ ಆಸ್ಪತ್ರೆಯ ನರರೋಗ ತಜ್ಞವೈದ್ಯರಾದ ಡಾ.ಪ್ರಶಾಂತ್ ಶ್ರೀಪುರಂ ಅವರು, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ ಅವರು,   ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ವಿಜಯ ಕುಮಾರ ಮಾಯೆಯ ಅವರು ಉಪಸ್ಥಿತರಿದ್ದರು.

Successful surgery of a 9-month-old baby at Surji Hospital


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close