SUDDILIVE || SHIVAMOGGA
38 ಕುರಿಗಳ ದಿಡೀರ್ ಸಾವು-ವಿಷಪೂರಿತ ಆಹಾರ ಸೇವನೆಯ ಶಂಕೆ-Sudden death of 38 sheep - suspected food poisoning
ಮೇಯಲು ಹೋಗಿದ್ದ 38 ಕುರಿಗಳು ದಿಢೀರ್ ಸಾವಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಬಂಗಾರಪ್ಪ ಸ್ಟೇಡಿಯಂ ಬಳಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಡಕಲಾಟ ಗ್ರಾಮದ ಕುರಿಗಾಹಿ ಸುರೇಶ ಬೀರಾ ಅವಡಖಾನ ಅವರಿಗೆ ಸೇರಿರುವ ಕುರಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಬುಧವಾರ 12 ಕುರಿಗಳು ಮೃತಪಟ್ಟಿದ್ದು, ಗುರುವಾರ 26 ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಪಶು ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದಾರೆ.ವಿಷಪೂರಿತ ಆಹಾರ ಸೇವಿಸಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕುರಿಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಡಾ. ಪ್ರದೀಪ್ ಕುಮಾರ್, ಪಶುವೈದ್ಯಕೀಯ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಭೇಟಿ ಪರಿಶೀಲನೆ ನೆರಸಿದ್ದಾರೆ.
Sudden death of 38 sheep - suspected food poisoning