ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಡಿಯೋ ವೈರಲ್-ಎಸ್ಪಿ ಹೇಳಿದ್ದೇನು?Video of Pakistan Zindabad slogans in Bhadravati goes viral - what did the SP say?

 SUDDILIVE || SHIVAMOGGA

ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಡಿಯೋ ವೈರಲ್-ಎಸ್ಪಿ ಹೇಳಿದ್ದೇನು?Video of Pakistan Zindabad slogans in Bhadravati goes viral - what did the SP say?

Pakistan, zindabad

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿನ್ನೆ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ನಿನ್ನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಿನ್ನೆ ಸಂಜೆ ಮೆರವಣಿಗೆ ನಡೆದಿದೆ. ಈ  ವೇಳೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕುರಿತು ಹಿಂದೂ ಜಾಗರಣ ವೇದಿಕೆ ದೇಶ ದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಆಗ್ರಹಿಸಿತ್ತು. 

ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಎಸ್ಪಿ ಮಿಥುನ್ ಕುಮಾರ್  ಭದ್ರಾವತಿ ಹಳೇ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಘಟನೆ ಕುರಿತು ದೂರು ದಾಖಲಾಗುತ್ತಿದೆ. 


ವಿಡಿಯೋದಲ್ಲಿ ಭದ್ರಾವತಿಯಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಪಾಕ್ ಪರ ಘೋಷಣೆ ಕೂಗಿದವರನ್ನ ಪರಿಶೀಲಿಸಲಾಗುತ್ತಿದ್ದು ಮುಂದಿನ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. 



ಈ ಪ್ರಕರಣ ಕುರಿತು ಮೂರು ತಂಡ ರಚಿಸಲಾಗಿದೆ. ಮೊದಲು ಎಫ್ಐಆರ್ ದಾಖಲಿಸಲಾಗುವುದು. ನಂತರ ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲಾಗುತ್ತಿದೆ. ಈ ಘಟನೆಯನ್ನ  ಪೊಲೀಸ್ ಇಲಾಖೆ ಭಾರಿ ಗಂಭೀರವಾಗಿ ಪರಿಗಣಿಸಿದೆ. ವಿಡಿಯೋವನ್ನ ಎಫ್ಎಸ್ಎಲ್ ಗೆ ಕಳುಹಿಸಲಾಗುವುದು ಎಂದರು. 

Video of Pakistan Zindabad slogans in Bhadravati goes viral - what did the SP say

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close