SUDDILIVE || HOSANAGARA
ಗುರುಟೆ ಬಳಿ ಲಾರಿ ಮತ್ತು ಬಸ್ ನಡುವೆ ಅಪಘಾತ-Accident between lorry and bus near Gurute
ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ದುರ್ಗಾಂಬ ಬಸ್ ಗೆ, ಎದುರುಗಡೆಯಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಉಂಟಾಗಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ
ಚಾಲಕ ರಮೇಶ್ ಎಂಬುವರ ಹಿಂಬದಿಯಲ್ಲಿಯೇ ಕುಳಿತಿದ್ದ ಬೆಂಗಳೂರು ಕೆಂಗೇರಿ ನಿವಾಸಿಯ ದಂಪತಿಗಳು ಅಪಘಾತದಲ್ಲಿ ಗಾಯಗೊಂಡಿದ್ದರು. ಕೆಂಗೇರಿಯಿಂದ ಶಿವಮೊಗ್ಗಕ್ಕೆ ಬಂದಿದ್ದ ದಂಪತಿಗಳು ಇಂದು ಬೆಳಿಗ್ಗಿನ ಜಾವ ಶಿವಮೊಗ್ಗ ದಿಂದ ಪ್ರಯಾಣ ಆರಂಭಿಸಿದ್ದರು.
ಗಾಯಾಳುಗಳನ್ನು ತಕ್ಷಣವೇ ಕುಂದಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Accident between lorry and bus near Gurute