SUDDILIVE || THIRTHAHALLI
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು-Car loses control and hits electric pole
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ತೀರ್ಥಹಳ್ಳಿ ಕೊಪ್ಪ ಮಾರ್ಗ ಮಧ್ಯೆಯ ಕುಂಬಾರದಡಿಗೆ ಬಳಿ ನಡೆದಿದೆ.
ತೀರ್ಥಹಳ್ಳಿಯ ಕುರುವಳ್ಳಿ ಸಮೀಪದ ಕುಂಬಾರದಡಿಗೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೊಪ್ಪ ಭಾಗದಿಂದ ತೀರ್ಥಹಳ್ಳಿಗೆ ಬರುವಾಗ ಈ ಅವಘಡ ಸಂಭವಿಸಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.
Car loses control and hits electric pole
