ad

SSLC ಮತ್ತು PUC ಪಾಸ್ ಮಾರ್ಕ್ಸ್ ನಲ್ಲಿ ಬದಲಾವಣೆ-Change in SSLC and PUC pass marks

 SUDDILIVE || SHIVAMOGGA

SSLC ಮತ್ತು PUC ಪಾಸ್ ಮಾರ್ಕ್ಸ್ ನಲ್ಲಿ ಬದಲಾವಣೆ-Change in SSLC and PUC pass marks

Change, passmarks

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಸಿ.ಬಿ.ಎಸ್.ಇ ಮತ್ತು ನೆರೆ ರಾಜ್ಯಗಳಲ್ಲಿ ಉತ್ತೀರ್ಣತೆ ಅಂಕಗಳಿಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳಲ್ಲೂ ಹಾಗೂ ಪ್ರತಿ ವಿಷಯದಲ್ಲಿ ಕನಿಷ್ಠ ಶೇಕಡಾ 33 ರಷ್ಟು ಅಂಕಗಳನ್ನು ಪಡೆಯಬೇಕೆಂಬ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಸವಿವ ಮಧು ಬಂಗಾರಪ್ಪ ತಿಳಿಸಿದರು.  

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು,  ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಸಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸ್ಸು ಮಾಡಿರುತ್ತಾರೆ ಎಂದರು. 

ಪ್ರಸ್ತುತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಕನಿಷ್ಠ ಶೇಕಡಾ 35 ಅಂಕಗಳನ್ನು ಪಡೆಯಬೇಕೆಂಬ ನಿಯಮವಿರುತ್ತದೆ. ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣವನ್ನು ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್‌ಇ ಹಾಗೂ ನೆರೆರಾಜ್ಯಗಳ ಉತ್ತೀರ್ಣತಾ ಮಾನದಂಡವನ್ನು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಸಹ ಅನ್ವಯವಾಗುವಂತೆ ಏಕರೂಪ ಪದ್ದತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮಂಡಲಿ ನಿಯಮಗಳಲ್ಲಿ ತಿದ್ದುಪಡಿ ತರಲು ಕರಡು ನಿಯಮದ ಅಧಿಸೂಚನೆಯಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ನೀಡಲು 15 ದಿನಗಳ ಕಾಲಾವಕಾಶ ನೀಡಿ ರಾಜ್ಯಪತ್ರ ಹೊರಡಿಸಲಾಗಿತ್ತು. 

ಕರಡು ಅಧಿಸೂಚನೆಯ ಪರವಾಗಿ 701 ಪತ್ರಗಳು ಸ್ವೀಕೃತವಾಗಿದ್ದು ಹಾಗೂ ಕೇವಲ 08 ಪತ್ರಗಳಲ್ಲಿ ಇದಕ್ಕೆ ಆಕ್ಷೇಪಿಸಿರುವುದರಿಂದ ಕರಡು ಅಧಿಸೂಚನೆಯಲ್ಲಿನ ನಿಯಮ ತಿದ್ದುಪಡಿಯನ್ನು 2025-26ನೇ ಸಾಲಿನಿಂದ ಅನುಷ್ಠಾನಗೊಳಿಸಲಾಗುತ್ತಿದೆ. 

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇಕಡಾ 33 ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 30 ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ ಎಂದರು. 

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ, ಅಭ್ಯರ್ಥಿಗಳು ಪ್ರತಿ ವಿಷಯದ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 30 ಅಂಕಗಳನ್ನು ವಡೆಯಬೇಕು ಹಾಗೂ ಪ್ರತಿ ವಿಷಯದಲ್ಲೂ ಲಿಖಿತ ಮತ್ತು ಪ್ರಾಯೋಗಿಕ/ಆಂತರಿಕ ಅಂಕಗಳು ಸೇರಿ ಕನಿಷ್ಠ 30 ಅಂಕಗಳನ್ನು ಪಡೆದು ಒಟ್ಟಾರೆ ಶೇಕಡಾ 33 (600ಕ್ಕೆ 198) ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.

ಈ ನೂತನ ನಿಯಮವು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಜರಾಗುವ ಹೊಸ (REGULAR) ವಿದ್ಯಾರ್ಥಿಗಳು, ಪುನರಾವರ್ತಿತ (REPEATER) ಹಾಗೂ ಖಾಸಗಿ (PRIVATE) ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ.

ಈ ಬದಲಾವಣೆಯು ರಾಜ್ಯದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಮತ್ತಷ್ಟು ವಿವರಗಳನ್ನು ಮಂಡಳಿ ಪ್ರಕಟಿಸಲಿದೆ ಎಂದು ತಿಳಿಸಿದರು. 

ಕೆಪಿಎಸ್ ಶಾಲೆ ಉನ್ನತೀಕರಣ

ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ ಮಾಡಲಾಗಿದೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಶಾಲೆಯನ್ನು ₹4.00ಕೋಟಿ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಸದರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು. 

Change in SSLC and PUC pass marks

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close