ad

ಪೊಲೀಸ್ ಹುತಾತ್ಮ ದಿನಾಚರಣೆ- Police Martyrs' Day

SUDDILIVE || SHIVAMOGGA

ಪೊಲೀಸ್ ಹುತಾತ್ಮ ದಿನಾಚರಣೆ- Police Martyrs' Day   

Police, Martyrsday



ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸಲಾಯಿತು. 

ದಿನಾಂಕ:21-10-1959 ರಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಡಿ.ಎಸ್.ಪಿ. ರವರಾದ ಕರಣ್ ಸಿಂಗ್ ನೇತೃತ್ವದ 20 ಜನರ ತಂಡ ಭಾರತ ಮತ್ತು ಚೀನಾ ದೇಶದ ಗಡಿ ಪ್ರದೇಶದ ಲಡಾಕ್ ನ ಹಾಟ್ ಸ್ಟಿಂಗ್ ಎಂಬ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವಾಗ ಚೀನಾ ದೇಶದ ಸೈನಿಕರು ಹಠಾತ್ತನೆ ಆಕ್ರಮಣ ಮಾಡಿ ಶ್ರೀ.ಕರಣ್ ಸಿಂಗ್ ಮತ್ತು ಇತರೆ 09 ಸಿಬ್ಬಂದಿಗಳನ್ನು ಹತ್ಯೆ ಮಾಡಿದ್ದು, ಹುತಾತ್ಮರ ದೇಹಗಳನ್ನು ದಿನಾಂಕ:28-11-1959 ರಂದು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಸಕಲ ಪೊಲೀಸ್ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಲಾಗಿರುತ್ತದೆ. 

ಈ ದಾರುಣ ಘಟನೆಯಲ್ಲಿ ಪ್ರಾಣ ತ್ಯಾಗ ಮಾಡಿದವರ ನೆನಪಿನಲ್ಲಿ ರಾಷ್ಟ್ರಾದ್ಯಾಂತ ಪ್ರತಿ ವರ್ಷ ಅಕ್ಟೋಬರ್ 21 ನೇ ತಾರೀಖಿನಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿ ವರ್ಷದ 21ನೇ ಅಕ್ಟೊಬರ್ ನಂದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯ ನಿರತ ಅವಧಿಯಲ್ಲಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿರವರನ್ನು ಗೌರವ ಪೂರ್ವಕವಾಗಿ ಸ್ಮರಿಸಲಾಗತ್ತಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ವಹಿಸಿದರು. ಮುಖ್ಯ ಆಹ್ವಾನಿತರಾಗಿ ಜಿಪಂ ಸಿಇಒ ಹೇಮಂತ್ ಎನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ  ಜಿ ಕೆ ಮಿಥುನ್ ಕುಮಾರ್ ಐಪಿಎಸ್ ರವರು ಮಾತನಾಡಿ, ಹುತಾತ್ಮ ಯೋಧರ ಸೇವೆಯನ್ನು ಸ್ಮರಿಸಿದರು.

ಸಮಾಜದ ರಕ್ಷಣಾ ಕರ್ತವ್ಯ ಪರಿಪಾಲನೆಯಲ್ಲಿ ದಿನಾಂಕ: 01-09-2024  ರಿಂದ 31-08-2025 ರ ಅವಧಿಯಲ್ಲಿ ಭಾರತ ದೇಶದಲ್ಲಿ ಒಟ್ಟು 191 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ, ಮೃತಪಟ್ಟಿರುತ್ತಾರೆ, ಇದರಲ್ಲಿ ಕರ್ನಾಟಕ ರಾಜ್ಯದ 08 ಪೊಲೀಸ್ ಅಧಿಕಾರಿ / ಸಿಬ್ಬಂದಿರವರು ಮೃತಪಟ್ಟಿದ್ದು ಇವರುಗಳ ಹೆಸರನ್ನು ವಾಚಿಸಿ, ಹುತಾತ್ಮರ ಸ್ತಂಭಕ್ಕೆ ಹೂ ಗುಚ್ಛವನ್ನು ಅರ್ಪಿಸುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು.  

ಈ ಸಂದರ್ಭದಲ್ಲಿ ಕಾರಿಯಪ್ಪ ಎ ಜಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರು – 1 ಶಿವಮೊಗ್ಗ ಜಿಲ್ಲೆ, ರಮೇಶ್ ಕುಮಾರ್ ಹೆಚ್ಚುವರಿ ಪೋಲಿಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ,  ಯುವಕುಮಾರ್ ಎಸ್ ಕಮಾಂಡೆಂಟ್ 8ನೇ ಪಡೆ ಕೆ.ಎಸ್.ಆರ್.ಪಿ ಮಾಚೇನಹಳ್ಳಿ, ಶಿವಮೊಗ್ಗ,  ಮಂಜುನಾಥ್ ಅಣಜಿ ಡೆಪ್ಯುಟಿ ಕಮಾಂಡೆಂಟ್, 2ನೇ ಪಡೆ ಕೆ.ಎಸ್.ಐ.ಎಸ್.ಎಫ್, ಶಿವಮೊಗ್ಗ,  ಬೆನಕ ಪ್ರಸಾದ್ ಐಪಿಎಸ್, ಎ.ಎಸ್.ಪಿ, ಸಾಗರ ಉಪ ವಿಭಾಗ,  ಬಾಬು ಆಂಜನಪ್ಪ ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ,  ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪ ವಿಭಾಗ,  ದಿಲೀಪ್ ಪೋಲಿಸ್ ಉಪಾಧೀಕ್ಷಕರು ಡಿಎಆರ್ ಶಿವಮೊಗ್ಗ,  ಅರವಿಂದ್ ಕಲಗುಚ್ಚಿ ಪೋಲಿಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ,  ಕೇಶವ್, ಪೋಲಿಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗ, ನಾಗರಾಜ್ ಪೋಲಿಸ್ ಉಪಾಧೀಕ್ಷಕರು ಭದ್ರಾವತಿ ಉಪವಿಭಾಗ, ಕೃಷ್ನಮೂರ್ತಿ ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ,  ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Police Martyrs' Day

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close