SUDDILIVE || SHIVAMOGGA
ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರಣ್ಯಶಾಸ್ತ್ರಗಳನ್ನೇ ಓದಿದ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಆಗ್ರಹಿಸಿ ಪ್ರತಿಭಟನೆ-Protest demanding that posts in the Forest Department be reserved for students who have studied forestry
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಲಯ ಅರಣ್ಯ ಅಧಿಕಾರಿ ಮತ್ತು ಉಪವಾಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಥಿಯನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ಫಾರೆಸ್ಟ್ ಸ್ಟೂಡೆಂಟ್ಸ್ ಅಂಡ್ ಗ್ರಾಜುಯೆಟ್ಸ್ ಅಸೋಸಿಯೇಷನ್ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ನೀಡಿದರು.
ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಕೃಷಿ ವಿಶ್ವವಿದ್ಯಾಲಯಗಳ ಕೃಷಿ ಮತ್ತು ಸಂಬಂಧಿತ ವಿಜ್ಞಾನಿಗಳಿಂದ ಪದವಿ ಪಡೆದವರಿಗೆ ಶೈಕ್ಷಣಿಕ ಅರ್ಹತೆಗೆ ನೇರವಾಗಿ ಸಂಬಂಧಿಸಿದ ಇಲಾಖೆಗಳಲ್ಲಿ ನೇರ ನೇಮಕಾತಿಯಲ್ಲಿ ಶೇಕಡ ನೂರರಷ್ಟು ಮೀಸಲಾತಿಯನ್ನು ಆಯಾ ಇಲಾಖೆಗಳಲ್ಲಿ ವೃತ್ತಿಪರತೆಯನ್ನು ಹೆಚ್ಚಿಸಲು ಒದಗಿಸಿದೆ.
ಉದಾರಣೆಗೆ ಸಹಾಯಕ ಕೃಷಿ ಅಧಿಕಾರಿ ಪಿಎಸಿ ಸಹಾಯಕ ತೋಟಗಾರಿಕಾ ಅಧಿಕಾರಿ ಬಿಎಸ್ಸಿ ತೋಟಗಾರಿಕೆ ಪಶು ವೈದ್ಯ ಅಧಿಕಾರಿ ಬಿ ಎಸ್ ಸಿ ರೇಷ್ಮೆ ಇದೇ ನಿಟ್ಟಿನಲ್ಲಿ ಅರಣ್ಯ ಪದವೀಧರ ಅವಶ್ಯಕತೆ ಮತ್ತು ಉಪಯುಕ್ತತೆಯನ್ನು ಗುರುತಿಸಿ, ತಮಿಳುನಾಡು ತೆಲಂಗಾಣ ಕೇರಳ ಒರಿಸ್ಸಾ ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ನಂತಹ ರಾಜ್ಯಗಳಲ್ಲಿ ತಮ್ಮ ಅರಣ್ಯ ಇಲಾಖೆಗಳಲ್ಲಿ ಮೀಸಲಾತಿಯನ್ನು ಒದಗಿಸಿದೆ.
ಈ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ ಅರಣ್ಯ ಪದವೀದರ ವಿದ್ಯಾರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಲಯ ಅರಣ್ಯ ಅಧಿಕಾರಿ ಮತ್ತು ಉಪವಲಯ ಅರಣ್ಯ ಅಧಿಕಾರಿ ಹುದ್ದೆಗಳಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರವನ್ನು ಕನಿಷ್ಠ ವಿದ್ಯಾರತೆಯನ್ನಾಗಿ ಬಿಎಸ್ಸಿ ಅರಣ್ಯ ಶಾಸ್ತ್ರ ಪದವೀಧರರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ವಿದ್ಯಾರ್ಥಿಗಳು ಮನವಿಯಲ್ಲಿ ಒತ್ತಾಯಿಸಿದ್ದಾರೆ.
Protest demanding that posts in the Forest Department be reserved for students who have studied forestry