SUDDILIVE || SHIVAMOGGA
ಸಮೀಕ್ಷೆಗೆ ತೆರಳಿದ ಶಿಕ್ಷಕಿಗೆ ನಾಯಿಕಡಿತ-Teacher attacked by dog while going for survey
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿನಾಯಿ ದಾಳಿ ನಡೆಸಿದೆ. ಗಾಯಗೊಂಡಿರುವ ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಶಿವಮೊಗ್ಗದ ರವಿವರ್ಮ ಬೀದಿ, ಆಜಾದ್ ನಗರ ಭಾಗದಲ್ಲಿ ಸರ್ವೆ ಕಾರ್ಯಕ್ಕೆ ತೆರಳಿದ್ದ ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕಿ ಉಮಾರಾಣಿ ಅವರ ಮೇಲೆ ನಾಯಿ ದಾಳಿ ಮಾಡಿದೆ. ಎಡಗಾಲಿಗೆ ನಾಯಿ ಕಚ್ಚಿದ್ದು ರಕ್ತ ಸುರಿಯುತ್ತಿದ್ದರು ಗಣತಿ ಕಾರ್ಯ ಮುಗಿಸಿ ಉಮಾರಾಣಿ ಅವರು ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಸುದ್ದಿವಾಹಿನಿಯೊಂದು ಸುದ್ದಿ ಮಾಡಿದೆ. ಆದರೆ ಶಿಕ್ಷಣ ಇಲಾಖೆ ಇದನ್ನ ಅಲ್ಲಗೆಳೆದಿದೆ.
ಅದೇ ರೀತಿ ಶನಿವಾರ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ವರು ತಲೆತಿರುಗಿದ ಘಟನೆ ಸಹ ನಡೆದಿದೆ. ಕೊನಗವಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ವರು ಸಮೀಕ್ಷೆಗೆ ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
Teacher attacked by dog while going for survey