SUDDILIVE|| SHIVAMOGGA||SHIKARIPUR
ಗೋಂಧಿ ಚಟ್ನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಮೂವರು ಸಾವು-Three killed in horrific road accident in Gondhi Chatnahalli
ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಗೋಂಧಿ ಚಟ್ನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದರೆ, ನಿನ್ನೆ ಶಿಕಾರಿಪುರದ ಬಳಿ ಹೋರಿ ಹಬ್ಬ ವೀಕ್ಷಸಿ ವಾಪಾಸ್ ಮನೆಗೆ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ
ಶಿವಮೊಗ್ಗ ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಗೂಡ್ಸ್ ವಾಹನವೊಂದು ಮರಕ್ಕೆ ಅಪ್ಪಳಿಸಿದ್ದು ಸ್ಥಳದಲಗಲಿಯೇ ಮೂವರು ಸಾವನ್ನಪ್ಪಿದ್ದಾರೆ.
ವಾಹನದಲ್ಲಿದ್ದ ನಾಲ್ವರಲ್ಲಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ ಎನ್ನಲಾಗುತ್ತಿದೆ. ಈ ಘಟನೆ ಇಂದು ಬೆಳಿಗ್ಗೆ ಸುಮಾರು 5-30 ಕ್ಕೆ ಸಂಭವಿಸಿದೆ.
ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ ( 50), ಸಾದಿಕ್ ( 30), ಮತ್ತು ಫಿರೋಜ್ ( 22) ಮೃತಪಟ್ಟಿದ್ದಾರೆ. ಮೃತರ ಪೈಕಿ ಅಸಾದುಲ್ಲಾ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದವರಾಗಿದ್ದು, ಸಾದಿಕ್ ಮತ್ತು ಫಿರೋಜ್ ಉತ್ತರಪ್ರದೇಶದ ಕಾರ್ಮಿಕರು ಎಂದು ತಿಳಿದು ಬಂದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿರಾಳಕೊಪ್ಪದಲ್ಲಿ ರಸ್ತೆ ಅಪಘಾತ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಯುವಕ ರಾಜೀವ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
Three killed in horrific road accident in Gondhi Chatnahalli


