SUDDILIVE || SHIVAMOGGA
ಬೆಂಗಳೂರು - ಶಿವಮೊಗ್ಗ ನಡುವೆ ಎರಡು ವಿಶೇಷ ರೈಲುಗಳ ಸಂಚಾರ-Two special trains run between Bengaluru and Shivamogga
ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಅಕ್ಟೋಬರ್ 22ರ ಬುಧವಾರ ಕೆಎಸ್‌ಆರ್ ಬೆಂಗಳೂರು-ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್- ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ವಿಶೇಷ ರೈಲುಗಳ ವಿವರಗಳು ಹೀಗಿವೆ:
06225 ಸಂಖ್ಯೆಯ ವಿಶೇಷ ರೈಲು, ಅಕ್ಟೋಬರ್ 22 ರಂದು ಬೆಳಿಗ್ಗೆ 08:05 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 01:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22ರಂದು ಸಂಜೆ 05:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ.
06215 ಸಂಖ್ಯೆಯ ವಿಶೇಷ ರೈಲು ಅಕ್ಟೋಬರ್ 22ರಂದು ಬೆಳಿಗ್ಗೆ 10:45 ಗಂಟೆಗೆ ಬೆಂಗಳೂರು ಕಂಟೋನ್ಮಂಟ್‌ನಿಂದ ಹೊರಟು, ಅದೇ ದಿನ ಸಂಜೆ 06:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 07:00 ಗಂಟೆಗೆ ಬೆಂಗಳೂರು ಕಂಟೋನ್ಮಂಟ್ ತಲುಪಲಿದೆ.
Two special trains run between Bengaluru and Shivamogga