SUDDILIVE || SHIVAMOGGA
ಕೌಟುಂಬಿಕ ಕಲಹದ ಹಿನ್ನಲೆ ಗೃಹಿಣಿಗೆ ವಿಷ ಉಣಿಸಿ ಕೊಲೆ?Housewife poisoned and murdered after family dispute?
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ.
ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪನವರ ಮಗಳಾದ ಪೂಜಾಳನ್ನ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ವಿಷ ಕೊಟ್ಟು ಕೊಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೂಜಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಪೂಜಾ ದಂಪತಿಗಳಿಗೆ ಎರಡು ವರ್ಷದ ಗಂಡು ಮಗುವಿತ್ತು. ಶರತ್ ತಂದೆ,ತಾಯಿ ಹಾಗೂ ಶರತ್ ನ ಸಹೋದರಿ ಶಬರಿ ಸೇರಿ ಪೂಜಾಳಿಗೆ ವರದಕ್ಷಿಣೆ ಕಿರುಕುಳ ನೀಡಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಮತ್ತೆ ಇದೇ ವಿಚಾರವಾಗಿ ಪೂಜಾ ಮೇಲೆ ಹಲ್ಲೆ ನಡೆದಿತ್ತು. ಪೂಜಾ ಗಂಡನ ಟಾರ್ಚರ್ ಬಗ್ಗೆ ತನ್ನ ತವರಿನ ಸದಸ್ಯರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ.
ತವರು ಮನೆಯವರಿಂದ ಸಮಾಧಾನ ಮಾಡಲಾಗಿತ್ತು. ಎರಡು ದಿನಗಳ ಹಿಂದೆ ಕಳೆನಾಶಕ ಕೊಟ್ಟು ಕೊಲೆಗೆ ಯತ್ನಿಸಲಾಗಿತ್ತು. ಇದನ್ನು ಆತ್ಮಹತ್ಯೆ ಅಂತಾ ಗಂಡನ ಕುಟುಂಬ ಬಿಂಬಿಸಲು ಯತ್ನಿಸಲಾಗಿತ್ತು. ಆದರೆ ಪೂಜಾಳ ಕುಟುಂಬ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಶರತ್ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದರು.
ಪೂಜಾಳನ್ನ ಕಳೆದುಕೊಂಡ ಪೂಜಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪತಿ ಶರತ್ ಹಾಗೂ ಆತನ ತಂದೆ ಸುಧಾಕರ್ ರನ್ನ ಪೊಲೀಸರು ಬಂಧಿಸಿದ್ದಾರೆ. ಅತ್ತೆ ರಾಧಾ ಮತ್ತು ಗಂಡನ ಅಕ್ಕ ಶಬರಿ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಎನ್ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Housewife poisoned and murdered after family dispute?
 

 
 
 
