ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು- Burude Chinnaiah granted bail

SUDDILIVE || SHIVAMOGGA

ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು- Burude Chinnaiah granted bail  

Burude, chinnaiah

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ.

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.


1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ (Bail) ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಸೆ.6 ಕ್ಕೆ ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗಿದ್ದ. ಭದ್ರತಾ ದೃಷ್ಠಿಯಿಂದ ಆತನನ್ನ ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಎರಡು ವರೆ ತಿಂಗಳ ಬಳಿಕ ಆತನಿಗೆ ಜಾಮೀನು ಮಂಜೂರಾಗಿದೆ.

Burude Chinnaiah granted bail  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close