ad

ದುಂಡುಮೇಜಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರ-Decision taken at the roundtable meeting

SUDDILIVE || SHIVAMOGGA

ದುಂಡುಮೇಜಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರ-Decision taken at the roundtable meeting 

Round, Table



ಜನಾಭಿಪ್ರಾಯ ಮೂಡಿಸುವುದಕ್ಕೆ ರಾಜ್ಯದಲ್ಲಿ ಪ್ರವಾಸ ಮಾಡುವುದು, ಜನವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಚಳುವಳಿ ಹಮ್ಮಿಕೊಳ್ಳುವುದು ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಬೇಕೆಂದು ಒತ್ತಾಯ ಮಾಡುವ ನಿರ್ಣಯವನ್ನು ದುಂಡು ಮೇಜಿನ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. 

ನಗರದ ಸರ್ಕಾರಿ ನೌಕರರ ಭವನದಲ್ಲಿ ಶರಾವತಿ ಕಣಿವೆ ಉಳಿಸಿ ಸಮಿತಿ-ಕರ್ನಾಟಕ, ಪರಿಸರ ಕಾರ್ಯಕರ್ತರ ಮತ್ತು ಪರಿಸರಾಸಕ್ತರ ದುಂಡು ಮೇಜಿನ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ಪಶ್ಚಿಮಘಟ್ಟದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಸ್ವಾಮೀಜಿಗಳು, ಪರಿಸರ ಪ್ರೇಮಿಗಳು, ರೈತ ನಾಯಕರು, ಹೋರಾಟಗಾರರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ರೈತ ಸಂಘಟನೆಗಳು, ದಲಿತ ಸಂಘಟನೆ, ಸಾಹಿತಿಗಳು, ಪರಿಸರ ಪ್ರೇಮಿ ಎನ್‌ಜಿಒಗಳನ್ನು ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು. 

ಜನವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಎಲ್ಲರೂ ಸೇರಿಕೊಂಡು ಹೋರಾಟ ಮಾಡುವುದು ಜೊತೆಗೆ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೂ ಯೋಜನೆಯಿಂದ ಆಗುವ ತೊಂದರೆಗಳ ಕುರಿತು ಮನವರಿಕೆ ಮಾಡುವುದು. ಕಡೆ ಅಸ್ತ್ರವಾಗಿ ಕಾನೂನು ಹೋರಾಟ ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

Decision taken at the roundtable meeting 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close