SUDDILIVE || SHIVAMOGGA
ಹೆಚ್ ಡಿಕೆ ಅರ್ದಂಬರ್ಧ ತಿಳಿದುಕೊಂಡಿದ್ದಾರೆ, ಅಧಿವೇಶನದಲ್ಲಿ ಉತ್ತರ ನೀಡಲಾಗುವುದು -ದಿನೇಶ್ ಗುಂಡೂರಾವ್-HDK has half information, answer will be given in the session - Dinesh Gundu Rao
ರಾಜ್ಯದಲ್ಲಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ ಸ್ತ್ರೀರೋಗ, ಅರಿವಳಿಕೆ ತಜ್ಞರ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿವೇಶನದ ಬಳಿಕ ಎರೆಡೆರೆಡು ಸ್ತ್ರೀರೋಗ, ಮಕ್ಕಳ ಹಾಗೂ ಅರವಳಿಕೆ, ಪ್ರಸೂತಿ ತಜ್ಞರನ್ನು ನೇಮಿಸಲಾಗುವುದು. ವೈಜ್ಞಾನಿಕವಾಗಿ ಬಾಣಂತಿ ಸಾವು ಪ್ರಕರಣ ಇಳಿಸಲಾಗುವುದು. ಅಧಿವೇಶನದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು. 2028 ರ ಹೊತ್ತಿಗೆ ಶೇ. 58 ರಷ್ಟಿರುವ ಬಾಣಂತಿ ಸಾವನ್ನ ಶೇ. 40 ಕ್ಕೆ ಇಳಿಸುವ ಗುರಿಹೊಂದಿರುವುದಾಗಿ ತಿಳಿಸಿದರು.
ಪ್ರತಿಯೊಂದು ಬಾಣಂತಿ ಸಾವು ಆಡಿಟ್ ಮಾಡಿಸುತ್ತೇವೆ. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು. ಎಲ್ಲಾ ವೈದ್ಯರ ವಿರುದ್ಧ ಕ್ರಮ ತೆಗೆದುಕೊಂಡರೆ ವೈದ್ಯರು ಯಾರೂ ಉಳಿಯೋದಿಲ್ಲ ಎಂದು ತಿಳಿಸಿದರು.
ಎನ್.ಹೆಚ್.ಎಂ. ಸಿಬ್ಬಂದಿಗಳ ನೇಮಕದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಮಂಗನ ಕಾಯಿಲೆ ಸಂಬಂಧಿಸಿದಂತೆ ಲಸಿಕೆ ಸಿದ್ಧವಾಗಿ ಪ್ರಯೋಗ ಮಾಡಲಾಗುತ್ತಿದೆ. ಮುಂದಿನ ವರ್ಷ ಲಸಿಕೆ ಲಭ್ಯವಾಗಲಿದೆ. ಈ ವರ್ಷ ಕೆ.ಎಫ್.ಡಿ. ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗದುಕೊಳ್ಳಲಾಗುವುದು ಎಂದರು.
ಯಾವುದೇ ಗೊಂದಲವಿಲ್ಲ
ರಾಜ್ಯದಲ್ಲಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಮುಂದೆಯೂ ಉತ್ತಮ ಆಡಳಿತ ನೀಡುತ್ತೇವೆ. ಸಿದ್ಧರಾಮಯ್ಯನವರು ಎಲ್ಲದಕ್ಕೂ ಬಹಳ ತಾಳ್ಮೆಯಿಂದ ಉತ್ತರ ನೀಡಿದ್ದಾರೆ. ಸಿದ್ಧರಾಮಯ್ಯ ಜನನಾಯಕರಾಗಿದ್ದು, ಕೊಟ್ಟ ಮಾತನ್ನು ಉಳಿಸಿಕೊಂಡು ನಡೆದುಕೊಂಡಿದ್ದಾರೆ ಎಂದರು.
ಕುಮಾರ ಸ್ವಾಮಿಗೆ ಅರ್ಧಂಬರ್ಧ ಮಾಹಿತಿಯಿದೆ
ಗ್ಯಾರಂಟಿ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ವಿಪಕ್ಷಗಳು ಬೇಕೆಂತಲೇ ಆರೋಪ ಮಾಡುತಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಗುಂಡೂರಾವ್ ಕುಮಾರಸ್ವಾಮಿ ಕೇವಲ ಅರ್ಧಂಬರ್ಧ ತಿಳಿದುಕೊಂಡು ಮಾತನಾಡುತ್ತಾರೆ. ಎಲ್ಲಾ ಇಲಾಖೆಗಳಲ್ಲಿ ಅಭಿವೃದ್ಧಿ ಕುಸಿತ ಎಂದಿರುವುದು ಸತ್ಯಕ್ಕೆ ದೂರವಾದುದು ಎಂದರು.
ಹೆಚ್ ಡಿಕೆ ಬಳಿ ಯಾವುದೇ ದಾಖಲೆಗಳಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಇದಕ್ಕೆ ಉತ್ತರ ನೀಡುತ್ತೇವೆ. ಕಾಂಗ್ರೆಸ್ ನ ಎಲ್ಲಾ ಶಾಸಕರು ಶಿಸ್ತಿನಿಂದ ವರ್ತಿಸಿದ್ದಾರೆ. ಯಾರೂ ಕೂಡ ರೆಸಾರ್ಟ್ ಗೆ ಹೋಗಿಲ್ಲ. ಬಿಜೆಪಿ ಅವಧಿಯಲ್ಲಿ ಕಿತ್ತಾಟ ಎಲ್ಲರೂ ನೋಡಿದ್ದಾರೆ. ಬಿಜೆಪಿ ಹಾಗೇ ರೆಸಾರ್ಟ್ ರಾಜಕೀಯ ನಮ್ಮಲ್ಲಿ ಯಾರು ಮಾಡಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಸಿಎಂ ಸೇರಿದಂತೆ ಎಲ್ಲರೂ ಬದ್ಧವಾಗಿದೆ ಎಂದರು.
HDK has half information, answer will be given in the session - Dinesh Gundu Rao
