ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ: ಪರಿಷ್ಕೃತ ವೇಳಾಪಟ್ಟಿ- Karnataka State Women's Commission Chairperson's district tour: Revised schedule

SUDDILIVE || SHIVAMOGGA

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ: ಪರಿಷ್ಕೃತ ವೇಳಾಪಟ್ಟಿ-Karnataka State Women's Commission Chairperson's district tour: Revised schedule

Commission, chairperson

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ  ಚೌಧರಿರವರು ನ. 23 ರಂದು ಸಂಜೆ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ನ.24 ರಿಂದ 25 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ. 24 ರಂದು ಬೆಳಗ್ಗೆ 9.00 ಕ್ಕೆ ನಗರದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಿರುವ ಪಿಯು ಹಾಗೂ ಪದವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮ. 12 ಕ್ಕೆ ನಗರದ ಸಹ್ಯಾದ್ರಿ ಕಲಾ ಹಾಗೂ ವಿಜ್ಞಾನ ಕಾಲೇಜ್‌ನಲ್ಲಿ ಏರ್ಪಡಿಸಲಿರುವ ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮ ಹಾಗೂ ಕಾನೂನು ಅರಿವಿನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮ. 4.30ಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆ ಭೇಟಿ ನೀಡಲಿದ್ದಾರೆ. ಸಂಜೆ 5.30ಕ್ಕೆ ನಗರದ ಬಿ.ಸಿ.ಎಂ. ಇಂಜಿನಿಯರಿAಗ್ ಮತ್ತು ಮೆಡಿಕಲ್ ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ಭೇಟಿ ನೀಡುವರು ಹಾಗೂ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ನ. 25 ರಂದು ಬೆ. 10.00ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ “POSH”  ಅಧಿನಿಯಮ 2013ರ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆ.11.00ಕ್ಕೆ ಶಿಕಾರಿಪುರಕ್ಕೆ ತೆರಳಿ ಬೆ.11.45ಕ್ಕೆ ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮ.12.45ಕ್ಕೆ ಶಿಕಾರಿಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಮ.1.30ಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ, ಮ 2.30ಕ್ಕೆ ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಭೇಟಿ, ಮ. 4.00ಕ್ಕೆ ಶಿಕಾರಿಪುರ ಪೊಲೀಸ್ ಠಾಣೆಗೆ ಭೇಟಿ,ಸಂಜೆ 5.00ಕ್ಕೆ ಚನ್ನಕೇಶವ ನಗರದ ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದು, ಸಂಜೆ 7.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ನ. 26 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ “POSH”  ಕಾಯ್ದೆಯ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ. ಬೆ. 11.00ಕ್ಕೆ ಮಹಿಳಾ ಸ್ಪಂಧನಾ ಕಾರ್ಯಕ್ರಮ ನಡೆಸಲಿದ್ದಾರೆ. ಮ. 12.00 ಕ್ಕೆ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮ. 3.00ಕ್ಕೆ ಪ್ರೆಸ್ ಮೀಟ್ ಮಾಡಲಿದ್ದಾರೆ. ಮ. 4.00ಕ್ಕೆ ಶಿವಮೊಗ್ಗದಿಂದ ಉಡುಪಿಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Karnataka State Women's Commission Chairperson's district tour: Revised schedule

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close