ಕೋಗಾರು ಭೀಮೇಶ್ವರ ದೇವಸ್ಥಾನ ಮತ್ತು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಪ್ರವಾಸಿ ತಾಣದ ಮಾನ್ಯತೆ-Kogaru Bheemeshwara Temple and Sigandur Chowdeshwari Temple recognized as tourist destinations

 SUDDILIVE || SHIVAMOGGA

ಕೋಗಾರು ಭೀಮೇಶ್ವರ ದೇವಸ್ಥಾನ ಮತ್ತು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ  ಪ್ರವಾಸಿ ತಾಣದ ಮಾನ್ಯತೆ-Kogaru Bheemeshwara Temple and Sigandur Chowdeshwari Temple recognized as tourist destinations  

Sigandooru, chowdeshwari

Siganduru, chowdeswari

ಶರಾವತಿ ನದಿಯ ಹಿನ್ನೀರಿನಲ್ಲಿರುವ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ  ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ‘ಪ್ರವಾಸಿ ತಾಣ’ ಮಾನ್ಯತೆಯ ಮುದ್ರೆ ಲಭಿಸಿದೆ.

ರಾಜ್ಯ ಸರ್ಕಾರವು ಪ್ರಕಟಿಸಿದ 2024–29ನೇ ಸಾಲಿನ ಪ್ರವಾಸೋದ್ಯಮ ನೀತಿಯ ಅಡಿಯಲ್ಲಿ ಜಿಲ್ಲಾವಾರು ಪ್ರವಾಸಿ ತಾಣಗಳಿಗೆ ಅನುಮೋದನೆ ದೊರೆತಿದ್ದು, ಈ ಪಟ್ಟಿಯಲ್ಲಿ ಸಾಗರ ತಾಲ್ಲೂಕಿನ ಒಟ್ಟು 15 ಸ್ಥಳಗಳು ಸೇರ್ಪಡೆಯಾಗಿವೆ. ಈ ಮೂಲಕ ಸಾಗರ ತಾಲ್ಲೂಕಿನಲ್ಲಿ ಪ್ರವಾಸಿ ಆಕರ್ಷಣೆಯ ತಾಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದಂತಾಗಿದೆ. ಈಗ ಹೊಸದಾಗಿ ಸೇರ್ಪಡೆಯಾಗಿರುವ ಪ್ರವಾಸಿ ತಾಣಗಳಲ್ಲಿ ದೇವಾಲಯಗಳ ಸಂಖ್ಯೆಯೇ ಅಧಿಕವಾಗಿದ್ದು, ಸಮೀಪದ ಕೋಗಾರು ಭೀಮೇಶ್ವರ ದೇವಸ್ಥಾನವೂ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಶರಾವತಿ ಹಿನ್ನೀರಿನ ಪ್ರದೇಶದ ವಿಶೇಷ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಈ ಪ್ರಯತ್ನವನ್ನು ಕೈಗೊಳ್ಳಲಾಗಿದೆ.

Kogaru Bheemeshwara Temple and Sigandur Chowdeshwari Temple recognized as tourist destinations  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close