ಬೀದಿನಾಯಿಗಳ ಉಪಟಳ ತಡೆಯಲು ಪಾಲಿಕೆಯಿಂದ ಕ್ರಮ- Municipal Corporation takes action to prevent stray dog ​​infestation

SUDDILIVE || SHIVAMOGGA

ಬೀದಿನಾಯಿಗಳ ಉಪಟಳ ತಡೆಯಲು ಪಾಲಿಕೆಯಿಂದ ಕ್ರಮ-  Municipal Corporation takes action to prevent stray dog ​​infestation  

Stray, dog



ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಆಯುಕ್ತರು/ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ)/ಪರಿಸರ ಅಭಿಯಂತರರು, ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳಿಗೆ ತಿಳಿಸುವುದು ಹಾಗೂ healthcitycorporation@gmail.com ಗೆ ಇ-ಮೇಲ್ ಮಾಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿAದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿAದಲೇ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

Municipal Corporation takes action to prevent stray dog ​​infestation  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close