SUDDILIVE || SHIVAMOGGA
ವಿವಿಯ ಡಿಜಿಟಲ್ ಮೌಲ್ಯಮಾಪನದಲ್ಲಿನ ಗೊಂದಲ ನಿವಾರಿಸಿ, NSUI ಮನವಿ- NSUI appeals to clear up confusion in university's digital assessment
ಡಿಜಿಟಲ್ ಮೌಲ್ಯಮಾಪನದಲ್ಲಿ ಆಗಿರುವ ಗೊಂದಲಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಇಂದು ಎನ್ ಎಸ್ ಯು ಐ ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಜಿಲ್ಲಾ N SU I ವತಿಯಿಂದ ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನೆಡಿಸಿ ನೀಡಿದ ಪಲಿತಾಂಶದಲ್ಲಿ ಸಾಕಷ್ಟು ಲೋಪಗಳಿದ್ದು ಪ್ರತೀ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳಿಗೆ 0.5.6.7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ ಹಾಗೂ ಉತ್ತೀರ್ಣ ಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣ ಗೊಂಡಿದ್ದಾರೆ . ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ ಯಾಗಿದೆ ಪರೀಕ್ಷಾ ಶುಲ್ಕ ಮರುಮೌಲ್ಯ ಮಾಪನ ಎಂದು ವಿದ್ಯಾರ್ಥಿಗಳಿಂದ ವಸೂಲಿ ಮಾಡಿಯು ಸಹ ಪಲಿತಾಂಶದ ಜೊತೆ ಆಟವಾಡುತ್ತಾ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆ ದೂರಿದೆ.
ಕೂಡಲೇ ವಿವಿಯ ಕುಲಸಚಿವರು (ಪರೀಕ್ಷಾಂಗ) ಈ ಬಗ್ಗೆ ಗಮನ ಹರಿಸಬೇಕು. ಡಿಜಿಟಲ್ ಮೌಲ್ಯಮಾಪನದಲ್ಲಿ ಆಗಿರುವ ಗೊಂದಲಗಳನ್ನು ಬಗೆಹರಿಸಬೇಕು. ವ್ಯವಸ್ಥಿತ ಪೂರ್ವಸಿದ್ಧತೆಯಿಲ್ಲದೇ ಡಿಜಿಟಲ್ ಮೌಲ್ಯಮಾಪನ ನಡೆಸಲು ಕಾರಣರಾದವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಯಾವುದೇ ಶುಲ್ಕ ಪಡೆಯದೇ ಎಲ್ಲಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಮೌಲ್ಯಮಾಪನ ಮಾಡಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ವಿವಿ ಬಂದ್ ನಂತಹ ತೀವ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಹಾಗೂ ಪರೀಕ್ಷಂಗ ಕುಲ್ ಸಚಿವರಿಗೆ ಮಾನವಿ ನೀಡಲಾಯಿತು ಈ ಸಂದರ್ಭದಲ್ಲಿ N S U I ನ ಕಾರ್ಯಾಧ್ಯಕ್ಷರಾದ ರವಿ ಕಟಿಕೆರೆ ಉಪಾಧ್ಯಕ್ಷರುಗಳಾದ ಆದಿತ್ಯ,ಸುಬಾನ್ ,ಪ್ರಧಾನ ಕಾರ್ಯ ದರ್ಶಿಯಾದ ಫರಾಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತ ರಿದ್ದರು.
NSUI appeals to clear up confusion in university's digital assessment
