ಅನಾರೋಗ್ಯದಿಂದ ಖೈದಿ ಸಾವು- Prisoner dies of illness

 SUDDILIVE || SHIVAMOGGA

ಅನಾರೋಗ್ಯದಿಂದ ಖೈದಿ ಸಾವು- Prisoner dies of illness 

Prisioner, illness

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ(50) ಅಲಿಯಾಸ್‌ ಸಜಿ ಬಾಬು ಮೃತ ಕೈದಿಯಾಗಿದ್ದಾನೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.


ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

Prisoner dies of illness 


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close