ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ-Protest by setting fire to labor laws

 SUDDILIVE || SHIVAMOGGA

ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ-Protest by setting fire to labor laws

Protest, labor


ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಮಿಕ ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ ಎಂದು ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು  ಏಕಪಕ್ಷೀಯವಾಗಿ ಜಾರಿಗೆ ಮುಂದಾಗಿದೆ. ಇವುಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ನಿರಂತರ ಪ್ರತಿಭಟನೆ ನಡೆಸುತ್ತಿವೆ. ಹೀಗಿದ್ದೂ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಹಿತೆ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು, ಕನಿಷ್ಠ ವೇತನ ಮಂಡಳಿ ಶಿಫಾರಸ್ಸು ಮಾಡಿರುವ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬೇಕು, ಕಾರ್ಖಾನೆ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದು ಕೆಲಸದ ಅವಧಿಯನ್ನು 12 ಗಂಟೆಗೆ ಕಡ್ಡಾಯಗೊಳಿಸಿರುವ ನಿಯಮ ಹಿಂಪಡೆಯಬೇಕು ಸೇರಿದಂತೆ 11 ಪ್ರಮುಖ ಬೇಡಿಕೆ ಈಡೇರಿಕೆಗೆ ಪ್ರತಿಭಟನಾಕಾರರು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ್‌, ಸಹ ಸಂಚಾಲಕ ಶಣ್ಮುಖಪ್ಪ, ಅನಂತರಾಮು.ಎಂ, ಕೆ.ಎಲ್‌. ರಾವ್‌, ಮುನಿರಾಜ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

Protest by setting fire to labor laws

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close