ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ನೀಡುವಂತೆ ಪ್ರತಿಭಟನೆ-Protest demanding salary subsidy for Kannada medium schools

SUDDILIVE || SHIVAMOGGA

ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ನೀಡುವಂತೆ ಪ್ರತಿಭಟನೆ-Protest demanding salary subsidy for Kannada medium schools

Protest, salary

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಎಲ್ಲಾ ಭಾಗ್ಯಗಳ ಜೊತೆ ವೇತನಾನುದಾನ ಭಾಗ್ಯವನ್ನು ನೀಡುವಂತೆ ಆಗ್ರಹಿಸಿ ಎಂದು ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಬೆಂಗಳೂರು ಘಟಕ ಇಂದು ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶಿಕ್ಷಣವನ್ನ ಖಾಸಗಿಕರಣ ಮತ್ತು ಮಠಮಾನ್ಯದವರಿಗೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿರುವುದರಿಂದ ಸರ್ಕಾರದ ಜವಾಬ್ದಾರಿಯನ್ನು ಕಡಿಮೆ ಮಾಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಶಿಕ್ಷಣ ನೀಡುವುದು ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಅನುದಾನ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ. ಈ ವಿಚಾರದಲ್ಲಿ ಸರ್ಕಾರ ಮಲತಾಯಿ ಧೋರಣೆ ತಡೆದಿರುವುದು ಕನ್ನಡಿಗರ ದುರ್ದೈವ ಎಂದು ಮನವಿಯಲ್ಲೇ ದೂರಲಾಗಿದೆ.

2010 ರಿಂದ ನಿರಂತರವಾಗಿ ಹೋರಾಟ ಮಾಡಿದರು ಸಹ ಕನ್ನಡ ಶಾಲೆಗಳು ಅವನತಿಯತ್ತ ಆಗುತ್ತಿವೆ 2019 ರಿಂದ ಕನ್ನಡ ಶಾಲೆಗಳಿಗೆ ಅನುದಾನ ಕೊಡಲು ಮನಸ್ಸು ಮಾಡಿ ಇಲಾಖೆಯಿಂದಲೇ ಮಾಹಿತಿಯನ್ನು ಕೂಡಿ ತಿಳಿಸಿ ನಾಲ್ಕೈದು ವರ್ಷಗಳಿಂದ ಬ್ಲಾಕ್ ವಾರು ಯೋಜನೆ ರೂಪಿಸಿ ಬಜೆಟ್ ನಲ್ಲಿ ಘೋಷಿಸುವುದಾಗಿ ವಿಧಾನ ಪರಿಷತ್ತಿನಲ್ಲಿ ಸದಸ್ಯರ ಪ್ರಶ್ನೆಗಳಿಗೆ ಭರವಸೆ ನೀಡಿದ್ದರು, ಸಮಸ್ಯೆ ಬಗೆಹರಿಯಲಿಲ್ಲ.

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ವೇತನ ಅನುದಾನ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುವ ಸಾವಿರಾರು ಶಿಕ್ಷಕರ ಬದುಕಿಗೆ ಹಾಗೂ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ಬಡ ಮಕ್ಕಳಿಗೆ ಆಸರೆಯಾಗಬೇಕು ಈ ಕೆಲಸಗಳು ಆಗದೆ ಇರುವ ಹಿನ್ನೆಲೆಯಲ್ಲಿ ಪ್ರತೊಭಟನಾಕಾರರು ಮನವಿಯಲ್ಲಿ ಆಗ್ರಹಿಸಿದ್ದಾರೆ.

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂದು ಒಕ್ಕೂಟ ಮನವಿಯಲ್ಲಿ ಆಗ್ರಹಿಸಿದೆ.

ಗೋಪಿರುತದಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಿಗೆ ಮೆರವಣಿಗೆ ನಡೆಸಿದ ಒಕ್ಕೂಟದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಡಿಸಿ ಶಿವಪ್ಪ ಜಾಲಮಂಗಲ ನಾಗರಾಜು ಪ್ರಧಾನ ಕಾರ್ಯದರ್ಶಿ ಎಸ್ ಹೊರಗಿನ ಮಠ ಮೊದಲಾದವರು ಭಾಗಿಯಾಗಿದ್ದರು.

Protest demanding salary subsidy for Kannada medium schools

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close