SUDDILIVE || SHIVAMOGGA
ಎರಡೂ ಸರ್ಕಾರದ ವೈಫಲ್ಯ ಆಯಾ ಬೆಂಬಲಿತ ಸಂಘಟನೆಗಳಿಂದ ಪ್ರತಿಭಟನೆ-Protests by organizations supporting both governments over their failures
ಎರಡಾಉ ಸರ್ಕಾರದ ವೈಫಲ್ಯತೆ ಖಂಡಿಸಿ ಆಯಾ ಪಕ್ಷದ ಬೆಂಬಲಿತ ಸಂಘಟನೆಗಳು ಇಂದು ಬೀದಿಳಿದು ಪ್ರತಿಭಟಿಸಿವೆ. ಪರಪ್ಪನ ಅಗ್ರಹಾರದ ಜೈಲಿನಲ್ಲಿನ ಅವ್ಯವಸ್ಥೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಘಟಕ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯ ಮುತ್ತಿಗೆ ಹಾಕಿದರೆ, ನಗರ ಯುವ ಕಾಂಗ್ರೆಸ್ ದೇಶದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದ್ದು ಅದನ್ನ ತಡೆಯುವಲ್ಲಿ ಗೃಹಸಚಿವ ಅಮಿತ್ ಶಾ ವಿಫಲರಾಗಿದ್ದಾರೆ. ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ರಾಷ್ಡ್ರಪತಿಗಳಿಗೆ ಪತ್ರ ರವಾನಿಸಿದೆ.
ದೆಹಲಿಯ ಕೆಂಪುಕೋಟೆ ಬಳಿಯ ಸ್ಫೋಟ ಪ್ರಕರಣದಲ್ಲಿ ಕೇಂದ್ರ ಸರಕಾರದ ವೈಫಲ್ಯ ಖಂಡಿಸಿ ಯುವ ಕಾಂಗ್ರೆಸ್ ಘಟಕದಿಂದ ನಗರದ ಗೋಪಿ ವೃತ್ತದ ಬಳಿಯಿರುವ ಪ್ರಧಾನ ಅಂಚೆ ಕಚೇರಿಯ ಎದುರು ಮಹಿಳಾ ಕಾರ್ಯಕರ್ತರ ಬಳೆಯನ್ನ ಬಾಗಿನ ಕೊಡುವ ಮರದಲ್ಲಿ ಸಂಗ್ರಹಿಸಿ ಉಗ್ರರ ದಾಳಿಯನ್ನ ತಡೆಯುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಹಾಗಾಗಿ ಬಳೆತೊಟ್ಟುಕೊಳ್ಳಲಿ ಎಂದು ಆಗ್ರಹಿಸಿದೆ.
ಭದ್ರತಾ ವೈಫಲ್ಯದಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸ್ಫೋಟದಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿದೆ. ಗೃಹ ಸಚಿವ ಅಮಿತ್ ಷಾ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಭದ್ರತಾ ವೈಫಲ್ಯಕ್ಕೆ ಗೃಹ ಸಚಿವರು ಕಾರಣ ಎಂದು ಆರೋಪಿಸಿದ ಮಹಿಳಾ ಕಾರ್ಯಕರ್ತರು ಗೃಹ ಸಚಿವರಿಗೆ ಬಳೆ ಕಳಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಅಂಚೆ ಮೂಲಕ ಮಹಿಳೆಯರು ತೊಡುವ ಬಳೆ ರವಾನಿಸಲಾಯಿತು. ದೇಶದ ಭದ್ರತೆಯಲ್ಲಿ ಮೋದಿ ಸರಕಾರದ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಗೃಹ ಸಚಿವರಿಂದ ರಾಜೀನಾಮೆ ಪಡೆದುಕೊಳ್ಳುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಯುವ ನಾಯಕರಾದ ರಂಗೇಗೌಡರು, ಗಿರೀಶ್, ಮಧುಸೂದನ್, ಯುವ ಕಾಂಗ್ರೆಸ್ ನ ಶಿವಮೊಗ್ಗ ನಗರ ಅಧ್ಯಕ್ಷ ಚರಣ್ ಜಿ ಶೆಟ್ಟಿ, ಗಿರೀಶ್, ಮಹಮ್ಮದ್ ಗೌಸ್, ಅಬ್ದುಲ್, ಆಕಾಶ್, ಅನಿಲ್, ಗೌತಮ್, ರವಿ, ಲಿಂಗರಾಜು, ಥೌಪಿಕ್ ನೂರಾರು ಯುವಕರು ಪಾಲ್ಗೊಂಡಿದ್ದರು.
ಬಿಜೆಪಿ ಪ್ರತಿಭಟನೆ
ಇತ್ಲಾಗೆ, ಶಿವಮೊಗ್ಗ ಎಸ್ಪಿ ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ದಿಂದ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪರಪ್ಪನ ಅಗ್ರಹಾರ ದಲ್ಲಿ ಉಗ್ರರಿಗೆ ರಾಜಾತಿಥ್ಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿಯಿಂದ ಎಸ್ಪಿ ಕಚೇರಿ ಮುತ್ತಿಗೆಗೆ ಯತ್ನಿಸಿದೆ.
ಎಸ್ಪಿ ಕಚೇರಿ ಗೆ ನುಗ್ಗಲು ಯತ್ನಿಸಿದ ಬಿಜೆಪಿ ಮುಖಂಡರನ್ನ ಮತ್ತು ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ರಾಜೀನಾಮೆಗೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿಯ ಹರಿಕೃಷ್ಣ, ದೀನ್ ದಯಾಳು, ಸುರೇಖಾ ಮುಳೀಧರ, ಸುಮಿತ್ರ ರಂಗನಾಥ್, ದರ್ಶನ್, ಎಸ್ಟಿ ಮೋರ್ಚಾದ ಅಧ್ಯಕ್ಷ ಹರೀಶ್ ಮೊದಲಾದವರು ಉಪಸ್ಥಿರಿದ್ದರು.
Protests by organizations supporting both governments over their failures
