ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ಶಿಕ್ಷೆ-Punishment for a person who committed sexual assault

SUDDILIVE || SHIVAMOGGA

ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ಶಿಕ್ಷೆ-Punishment for a person who committed sexual assault   

Punishment, sexual

ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1 ಶಿವಮೊಗ್ಗ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

2022 ನೇ ಸಾಲಿನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಭದ್ರಾವತಿ ಹಳೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿಗಳಾದ ರಾಘವೇಂದ್ರ ಕಂಡಿಕೆ ಸಿಪಿಐ ಭದ್ರಾವತಿ ನಗರ ವೃತ್ತ ರವರು ಸದರಿ ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. 

ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭೀಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1 ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ  ನಿಂಗನಗೌಡ ಪಾಟೀಲ್ ರವರು ಆರೋಪಿತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 65,000/- ರೂ ದಂಡ ಮತ್ತು ನೊಂದ ಬಾಲಕಿಗೆ ಸರ್ಕಾರದ ಪರವಾಗಿ 4,50,000/- ರೂ ಪರಿಹಾರ ನೀಡಬೇಕಾಗಿ ಆದೇಶಿಸಿರುತ್ತಾರೆ.

Punishment for a person who committed sexual assault

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close