ad

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ ನಾಯಕ್ ವರ್ಗಾವಣೆ-Shimoga District Principal District Judge Manjunath Naik transferred

 SUDDILIVE || SHIVAMOGGA

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಮಂಜುನಾಥ ನಾಯಕ್ ವರ್ಗಾವಣೆ-Shimoga District Principal District Judge Manjunath Naik transferred

Judge, transfer



ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಗೌರವಾನ್ವಿತ ಶ್ರೀ ಮಂಜುನಾಥ ನಾಯಕ್ ರವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಗೌರವಾನ್ವಿತ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ದಿನಾಂಕ 30.10.2025 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಆದೇಶಿಸಿದೆ. 

ಶ್ರೀ ಮಂಜುನಾಥ್ ನಾಯಕ್ ರವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಗೌರವಾನ್ವಿತ ಉಚ್ಛ ನ್ಯಾಯಾಲಯದಲ್ಲಿ ನೇಮಕಾತಿ ನಿಭಂಧಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಶಿವಮೊಗ್ಗದಲ್ಲಿ ಪದಗ್ರಹಣ ಮಾಡಿಕೊಂಡಿದ್ದರು. ಗೌರವಾನ್ವಿತ ನ್ಯಾಯಾಧೀಶರು ದಿನಾಂಕ 03.11.2025 ರಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದದಿಂದ ಮುಕ್ತಗೊಂಡು ದಿನಾಂಕ 05.11.2025 ರಂದು ಬೆಳಗಾವಿಗೆ ತೆರಳಿ ಅಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದಗ್ರಹಣವನ್ನು ಮಾಡಲಿದ್ದಾರೆ. 

ಗೌರವಾನ್ವಿತ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್ಗಳನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಿ ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳು ರಾಜಿ ಸಂಧಾನದ ಮೂಲಕ ಅಂತಿಮವಾಗಿ ವಿಲೇವಾರಿ ಮಾಡಲು ನ್ಯಾಯಾಧೀಶರಿಗೆ, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಹಾಗೂ ನ್ಯಾಯವಾದಿಗಳಿಗೆ ಮತ್ತು ಪಕ್ಷಗಾರರಿಗೆ ಮಾರ್ಗದರ್ಶನ ನೀಡಿ ಬಹು ಮುಖ್ಯವಾದ ಪಾತ್ರವನ್ನು ನಿರ್ವಹಿಸುತ್ತಾರೆ. 

ಗೌರವಾನ್ವಿತ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕಾತಿ ಮಾಡಿರುತ್ತಾರೆ ಹಾಗೂ ಸೇವೆಯಲ್ಲಿದ್ದ 54 ಸಿಬ್ಬಂದಿಗಳ ಸೇವೆಯನ್ನು ಪರಿಶೀಲಿಸಿ ಅವರಿಗೆ ಮುಂಬಡ್ತಿಯನ್ನು ನೀಡಿರುತ್ತಾರೆ. ಅಲ್ಲದೆ  ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 69 ಸಿಬ್ಬಂದಿಗಳು ತೃಪ್ತಿಕರವಾಗಿ ಪ್ರೊಬೇಷನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಆದೇಶ ಹೊರಡಿಸಿ ಅಂತಹ ಸಿಬ್ಬಂದಿಗಳನ್ನು ಸಾರ್ವಜನಿಕ ಸೇವೆಯಲ್ಲಿ ಖಾಯಂಗೊಳಿಸಿ ಆದೇಶಿಸುತ್ತಾರೆ. 

ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಗೌರವಾನ್ವಿತರು ಪದಗ್ರಹಣ ಮಾಡಿದ ದಿನದಿಂದ ಈ ದಿನದವರೆಗೂ ಹಲವಾರು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿ ಗೌರವಾನ್ವಿತ ಉಚ್ಚ ನ್ಯಾಯಾಲಯ ನಿಗದಿಪಡಿಸಿದ ನಿಯಮಕ್ಕಿಂತ ಮೂರು ಪಟ್ಟು ಅಧಿಕ ಪ್ರಕರಣಗಳಲ್ಲಿ ಆದೇಶ ನೀಡುವುದರ ಮೂಲಕ ವಿಲೇಗೊಳಿಸಿದ್ದಾರೆ. 

ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಾಧಿಕಾರದ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಅಭಿಯಾನಗಳಲ್ಲಿ ಅನೇಕ ಸರಕಾರಿ ಇಲಾಖೆಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಸಹಕಾರ ನೀಡುವ ಮೂಲಕ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾಮಾನ್ಯ ಜನರಿಗೆ ಕಾನೂನು ಅರಿವನ್ನು ನೀಡುವಲ್ಲಿ ಹಾಗೂ ಅರ್ಹ ವೆಕ್ತಿಗಳಿಗೆ ಕಾನೂನು ನೆರವನ್ನು ನೀಡುವಲ್ಲಿ ಮತ್ತು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವಿಚಾರಣಾ ಹಂತದ ವಿವಿಧ ಸ್ವರೂಪದ ಪ್ರಕರಣಗಳು ಅಂತಿಮವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವಲ್ಲಿ ಅತ್ಯುನ್ನತ ಸೇವೆಯನ್ನು ಸಲ್ಲಿಸಿರುತ್ತಾರೆ. 

ಗೌರವಾನ್ವಿತರ ಶ್ರೇಷ್ಠ ಸೇವೆ ಅತಿ ಹೆಚ್ಚು ಸಾರ್ವಜನಿಕರಿಗೆ ಲಭಿಸಲಿ ಮತ್ತು ಅವರು ವರ್ಗಾವಣೆಗೊಂಡು ತೆರಳುತ್ತಿರುವ ಸ್ಥಳದಲ್ಲಿ ಇನ್ನು ಹೆಚ್ಚಿನ ಸೇವಾ ಅವಕಾಶ ಲಭಿಸಲಿ ಎಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು, ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸಿಬ್ಬಂದಿ ವರ್ಗದವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನೊಳಗೊಂಡಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Shimoga District Principal District Judge Manjunath Naik transferred

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close