SUDDILIVE || SHIVAMOGGA
ನ.30 ರಂದು ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರ ಸ್ವಾಮಿ-Union Minister Kumaraswamy to visit Shivamogga on November 30
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನವಂಬರ್ 30ರಂದು ಭಾನುವಾರ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಭಗವದ್ಗೀತೆ ಅಭಿಯಾನದಲ್ಲಿ ಪಾಲ್ಗೊಳ್ಳಲು ಸಚಿವ ಕುಮಾರಸ್ವಾಮಿಯವರ ಆಗಮಿಸುತ್ತಿದ್ದಾರೆ.
ಬೆಂಬೆಂಗಳೂರಿನ ಹೆಚ್ಎಎಲ್ ನಿಂದ ಹೊರಟು ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಗೆ ಬಂದಿಳಿಯಲಿದ್ದಾರೆ. ನಿಮ್ಮನೆ ಗಾಲ್ಫ್ ನಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನಂತರ ಸಚಿವರು ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಭಗವದ್ಗೀತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10:45 ನಿಂದ ಮಧ್ಯಾಹ್ನ 12 ಗಂಟೆಯವರೆಗೆ ಭಗವದ್ಗೀತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವ ಎಚ್ ಡಿ ಕುಮಾರಸ್ವಾಮಿ ಹನ್ನೆರಡುವರೆ ನಂತರ ಭದ್ರಾವತಿಯ ವಿ ಐ ಎಸ್ ಎಲ್ ನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ನಂತರ 2-24 ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
Union Minister Kumaraswamy to visit Shivamogga on November 30
