ಕಾರು–ಲಾರಿ ಮುಖಾಮುಖಿ ಡಿಕ್ಕಿ ಓರ್ವ ಯುವಕ ಗಂಭೀರ-A young man is in serious condition after a head-on collision between a car and a truck

SUDDILIVE || RIPPONPETE

ಕಾರು–ಲಾರಿ ಮುಖಾಮುಖಿ ಡಿಕ್ಕಿ  ಓರ್ವ ಯುವಕ ಗಂಭೀರ-A young man is in serious condition after a head-on collision between a car and a truck    

Head-on, collision


ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ತೀರ್ಥಹಳ್ಳಿ ಎಳ್ಳಮಾವಸೆ ಜಾತ್ರೆ ಮುಗಿಸಿಕೊಂಡು ಹಿಂದಿರುಗುತ್ತಿದ್ದ ಮಾದಾಪುರ ಸಮೀಪದ ಲಕ್ಕುವಳ್ಳಿ ಗ್ರಾಮದ ಯುವಕರು ಪ್ರಯಾಣಿಸುತ್ತಿದ್ದ ಮಾರುತಿ ವ್ಯಾಗನರ್ ಕಾರು, ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಯೊಂದಿಗೆ ವಿನಾಯಕ ವೃತ್ತದಲ್ಲಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಘಟನೆಯ ವೇಳೆ ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣವೇ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

A young man is in serious condition after a head-on collision between a car and a truck

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close