ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲಿಗೆ ಬದಲಿ ಮಾರ್ಗ ಸೂಚನೆ-Alternative route notice for Yeshwantpur-Shivamogga Express train

 SUDDILIVE || SHIVAMOGGA

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲಿಗೆ ಬದಲಿ ಮಾರ್ಗ ಸೂಚನೆ-Alternative route notice for Yeshwantpur-Shivamogga Express train     

Yashwanthpur, rail

ವಿವಿಧ ಕಾಮಗಾರಿಗಳ ಹಿನ್ನೆಲೆ ತಾಳಗುಪ್ಪ – ಬೆಂಗಳೂರು ಸೂಪರ್‌ ಫಾಸ್ಟ್‌ ರೈಲನ್ನು ಅರಸೀಕರೆವರೆಗೆ ನಿಯಂತ್ರಿಸಲಾಗುತ್ತಿದೆ. ಇನ್ನು ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಬದಲಿ ಮಾರ್ಗಗದಲ್ಲಿ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿದಿನ ಬೆಳಗ್ಗೆ 5.20ಕ್ಕೆ ಹೊರಡುವ ತಾಳಗುಪ್ಪ – ಬೆಂಗಳೂರು ಸೂಪರ್‌ ಫಾಸ್ಟ್‌ ರೈಲು (ರೈಲು ಸಂಖ್ಯೆ 20652) ನಾಲ್ಕು ದಿನ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತಿದೆ. ಈ ರೈಲು ಡಿಸೆಂಬರ್‌ 17, 20, 21 ಮತ್ತು 24ರಂದು ಈ ರೈಲು ಬೆಂಗಳೂರಿನ ಬದಲು ಅರಸೀಕೆರೆವರೆಗೆ ಮಾತ್ರ ಸಂಚರಿಸಲಿದೆ.

ಪ್ರತಿದಿನ ಬೆಳಗ್ಗೆ 9.15ಕ್ಕೆ ಹೊರಡುವ ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ನಾಲ್ಕು ದಿನ ಬದಲಿ ಮಾರ್ಗದಲ್ಲಿ ಸಂಚರಿಸಲಿದೆ. ಡಿಸೆಂಬರ್‌ 17, 20, 21 ಮತ್ತು 24 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16579 ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಇದು ತುಮಕೂರು ಮತ್ತು ತಿಪಟೂರು ನಿಲುಗಡೆಗಳನ್ನು ಇರುವುದಿಲ್ಲ.

ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ವಿವಿಧ ಇಂಜಿನಿಯರಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್‌ವೇನಲ್ಲಿ ಗಾರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ವಿವಿಧ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Alternative route notice for Yeshwantpur-Shivamogga Express train

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close