SUDDILIVE || SHIVAMOGGA
ಅಪಘಾತದಲ್ಲಿ ಗಾಯಗೊಂಡಿದ್ದ ಅಡಿಕೆ ವರ್ತಕ ನಿಧನ- Areca nut trader injured in accident dies
ಆಯನೂರು ಸಮೀಪ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ್ದ ಬಸ್ – ಕಾರ್ ಡಿಕ್ಕಿಯಲ್ಲಿ ಗಾಯಗೊಂಡಿದ್ದ ನಗರದ ಅಡಿಕೆ ಮಂಡಿ ವರ್ತಕ ಬಿ.ಟಿ. ಶ್ರೀನಿವಾಸ್ (79) ಶನಿವಾರ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಶನಿವಾರ ಅಸುನೀಗಿದ್ದಾರೆ. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಪಾರ್ಥಿವ ಶರೀರವನ್ನು ಶಿವಮೊಗ್ಗದ ಬಸವೇಶ್ವರ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗಿದ್ದು, ಭಾನುವಾರ ಬೆಳಿಗ್ಗೆ 11 ಗಂಟೆಗೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Areca nut trader injured in accident dies
