ಇಡುವಣಿ ಬಳಿ ಎರಡು ಬಸ್ ಗಳ ನಡುವೆ ಡಿಕ್ಕಿ- Collision between two buses near Iduvani

 SUDDILIVE || KARGAL

ಇಡುವಣಿ ಬಳಿ ಎರಡು ಬಸ್ ಗಳ ನಡುವೆ ಡಿಕ್ಕಿ- Collision between two buses near Iduvani   

Collision, bus


ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಇಡುವಾಣಿ ಎಂಬಲ್ಲಿ ಇವತ್ತು ಬೆಳಗ್ಗೆ  ಎರಡು ಬಸ್‌ಗಳ ನಡುವೆ  ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಲ್ಲಿ ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. 

ಜೋಗ ಮತ್ತು ಕಾರ್ಗಲ್ ಭಾಗದಿಂದ ಶಾಲಾ ಮಕ್ಕಳನ್ನು ಸಾಗರಕ್ಕೆ ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ಹಾಗೂ ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ನಡುವೆ  ಇಡುವಾಣಿ ಹತ್ತಿರ ಅಪಘಾತವಾಗಿದೆ. 

ಘಟನೆಯಲ್ಲಿ  ಸ್ಕೂಲ್ ಬಸ್‌ನಲ್ಲಿದ್ದ ಬಹುತೇಕ ಎಲ್ಲಾ ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಮಕ್ಕಳಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ಧಾರೆ. ಇನ್ನೂ ಎರಡು ಬಸ್‌ಗಳ ಚಾಲಕರಿಗೂ ಗಂಭೀರ ಗಾಯಗಳಾಗಿದೆ. ಅಪಘಾತದಲ್ಲಿ ಎರಡು ಬಸ್‌ಗಳ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Collision between two buses near Iduvani

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close