ರೂಪ್ಲಾನಾಯ್ಕ್ ಮನೆಯ ಮೇಲೆ ಲೋಕಾಯುಕ್ತ ದಾಳಿ-Lokayukta raids Ruplanoyak's house

SUDDILIVE || SHIVAMOGGA

ರೂಪ್ಲಾನಾಯ್ಕ್ ಮನೆಯ ಮೇಲೆ Decathlon ದಾಳಿ-Lokayukta raids Ruplanoyak's house   

Raid, lokayukta


ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಕೆ ಆರೋಪದ ಅಡಿಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾನಾಯ್ಕ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. 

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ, ಕಚೇರಿ ಮತ್ತಿತರ ಕಡೆ  ಲೋಕಾಯುಕ್ತ ತಂಡ ದಾಳಿ ನಡೆಸಿದೆ. 

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತರು, ಬಸವನಗುಡಿಯ ಮನೆ,  ಶಿವಮೊಗ್ಗದ ಕಚೇರಿ ಬೆಂಗಳೂರಿನ ಕೆಂಗೇರಿಯಲ್ಲಿರುವ ನಾಯ್ಕರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. 


ಮತ್ತು ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದ ಎಸ್ ಹಟ್ಟಿ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕುಂಬಳಗೋಡು ಬಳಿಯ ಆರ್ ಆರ್ ಡೆಂಟಲ್ ಕಾಲೇಜ್ ಹಾಗೂ ಕೆಂಗೇರಿ ಸೆಟಲೈಟ್ ನಿಲ್ದಾಣದ ಬಳಿ  ರುಪ್ಲಾ ನಾಯ್ಕ ಮನೆ ಹೊಂದಿದ್ದರು. 

ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಪ್ರತ್ಯೇಕ ತಂಡಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವ ದಾಖಲೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. 

Lokayukta raids Ruplanoyak's house

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close