ಒಂದು ದಿನ ವಿದ್ಯುತ್ ವ್ಯತ್ಯಯಕ್ಕೆ ಎರಡು ದಿನ ನೀರು ಸರಬರಾಜಿನಲ್ಲೂ ವ್ಯತ್ಯಯ-One day of power outage leads to two days of water supply disruption

SUDDILIVE || SHIVAMOGGA

ಒಂದು ದಿನ ವಿದ್ಯುತ್ ವ್ಯತ್ಯಯಕ್ಕೆ ಎರಡು ದಿನ ನೀರು ಸರಬರಾಜಿನಲ್ಲೂ ವ್ಯತ್ಯಯ-One day of power outage leads to two days of water supply disruption   

Power, Outage

ಶಿವಮೊಗ್ಗದಲ್ಲಿ ಒಂದು ದಿನ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ನೀರು ಸರಬರಾಜಿನಲ್ಲಿ ಎರಡು ದಿನ ವ್ಯತ್ಯಯವಾಗಲಿದೆ. 

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಗೆ ಬರುವ ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಡಿ.11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

One day of power outage leads to two days of water supply disruption

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close