ಚಿಕಿತ್ಸೆ ಪಡೆಯುತ್ತಿದ್ದ ಖೈದಿ ಮಧುಮೇಹದಿಂದ ಸಾವು-Prisoner undergoing treatment dies of diabetes

 SUDDILIVE || SHIVAMOGGA

ಚಿಕಿತ್ಸೆ ಪಡೆಯುತ್ತಿದ್ದ ಖೈದಿ ಮಧುಮೇಹದಿಂದ ಸಾವು-Prisoner undergoing treatment dies of diabetes

Prisioner, diabetic

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ.

ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಇಂದು ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Prisoner undergoing treatment dies of diabetes

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close